ಚೌಹಾಣ್ ಆಗಮನ; ಕಾಂಗ್ರೆಸ್ ಪಕ್ಷದಲ್ಲಿ ಸಂಚಲನ
ಬೆಂಗಳೂರು, ಆ.13:ಕೇಂದ್ರ ಸಚಿವ,ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ಪೃಥ್ವಿರಾಜ್ ಚೌವ್ಹಾಣ್ ಬುಧವಾರ ಬೆಂಗಳೂರಿಗೆ ಆಗಮಿಸಿದ ಕಾರಣ ಹಲವಾರು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಂಗ್ರೆಸ್ ಚಟುವಟಿಕೆಗಳು ಒಮ್ಮೆಲೆ ಗರಿಗೆದರಿಕೊಂಡಿವೆ.
ಕಾಂಗ್ರೆಸ್ ಮುಖಂಡರಾದ ಎಸ್.ಎಂ.ಕೃಷ್ಣ ಹಾಗೂ ಮತ್ತಿತರ ಕಾಂಗ್ರೆಸ್ ನಾಯಕರೊಂದಿಗೆ ಮಹತ್ವದ ಮಾತುಕತೆ ನಡೆಸಿದ ಅವರು,ಮಲ್ಲಿಕಾರ್ಜುನ ಖರ್ಗೆ ಅವರ ರಾಜೀನಾಮೆಯಿಂದ ತೆರವಾಗಿರುವ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡುವ ಸಂಬಂಧ ಚರ್ಚಿಸಿದರು. ಕಾಂಗ್ರೆಸ್‌ನ ಕಾರ್ಯಕರ್ತರು, ಮುಖಂಡರ ಅಭಿಪ್ರಾಯವನ್ನು ಸಂಗ್ರಹಿಸಿ ನೂತನ ಅಧ್ಯಕ್ಷರ ಆಯ್ಕೆ ಬಗ್ಗೆ ಹೈಕಮಾಂಡ್‌ಗೆ ಮಾಹಿತಿ ರವಾನಿಸಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿ ಡಿ.ಕೆ.ಶಿವಕುಮಾರ್,ಆರ್.ವಿ.ದೇಶಪಾಂಡೆ,ಡಿ.ಬಿ.ಚಂದ್ರೇಗೌಡ,ಬಿ.ಎಲ್.ಶಂಕರ್,ಸಿದ್ದರಾಮಯ್ಯ ಸೇರಿದಂತೆ ಹಲವಾರು ಪ್ರಮುಖರು ತೆರೆಮರೆಯ ಕಸರತ್ತು ನಡೆಸಿದ್ದಾರೆ. ಪ್ರಬಲ ಆಕಾಂಕ್ಷಿಯಾಗಿರುವ ಡಿ.ಕೆ.ಶಿವಕುಮಾರ್ ಪರ 40 ಹೆಚ್ಚು ಶಾಸಕರು ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ನೀಡಬೇಕೆಂದು ಚೌವ್ಹಾಣ್ ಅವರನ್ನು ಒತ್ತಾಯಿಸಿದ್ದಾರೆ.
ಬುಧವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಮನೆ ಭೇಟಿ ನೀಡಿದ ಚೌಹಾಣ್ ಅರ್ಧಗಂಟೆಗೂ ಹೆಚ್ಚು ಕಾಲ ಚರ್ಚಿಸಿದರು. ಪಕ್ಷದ ರಾಜ್ಯಾಧ್ಯಕ್ಷರ ನೇಮಕ,ಉಪ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಕುರಿತು,ಜೆಡಿಎಸ್ ಜೊತೆಗಿನ ಮೈತ್ರಿ ಮುಂತಾದ ವಿಷಯಗಳ ಕುರಿತು ಅವರು ದೀರ್ಘವಾಗಿ ಚರ್ಚಿಸಿದರು.
(ದಟ್ಸ್‌ಕನ್ನಡ ವಾರ್ತೆ)
ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ದೊರೆಯುವ ಸಾಧ್ಯತೆ!
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಆರ್.ವಿ.ದೇಶಪಾಂಡೆ?
ಮಾಸಾಂತ್ಯಕ್ಕೆ ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ












Click it and Unblock the Notifications