ಬೆಂಗಳೂರು ಮಾಜಿ ಮೇಯರ್ ನಾಗರಾಜ್ ನಿಧನ
ಬೆಂಗಳೂರು, ಆ.18: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ,ಬೆಂಗಳೂರಿನ ಮಾಜಿ ಮೇಯರ್ ಸಿ.ಎಂ.ನಾಗರಾಜ್(68) ಸೋಮವಾರ ಬೆಳಗ್ಗೆ ನಿಧನರಾದರು.ಅವರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಧುಮೇಹ ಮತ್ತು ಕಿಡ್ನಿ ವೈಫಲ್ಯ ಅವರನ್ನು ಬಾಧಿಸುತ್ತಿತ್ತು. ಮೃತರ ಅಂತ್ಯಕ್ರಿಯೆಯನ್ನು ಹರಿಶ್ಚಂದ್ರ ಘಾಟ್‍ನಲ್ಲಿ ಸಂಜೆ 4 ಗಂಟೆಗೆ ನೆರೆವೇರಿಸಲಾಯಿತು.
ಗಾಯತ್ರಿ ನಗರ ವಾರ್ಡ್‌ನಿಂದ ಕೌನ್ಸಿಲರ್ ಆಗಿ ಆಯ್ಕೆಯಾಗಿದ್ದ ನಾಗರಾಜ್ ಈ ಭಾಗದಲ್ಲಿ ಬಹಳಷ್ಟು ಜನಪ್ರಿಯತೆ ಗಳಿಸಿದ್ದರು. ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಆಪ್ತರಾಗಿದ್ದರು. ಈಸ್ಟ್ ವೆಸ್ಟ್ ಗ್ರೂಪ್ ಅಡಿ ಅನೇಕ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಿದ್ದರು. 2003ರಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾಗಿ ಕಾರ್ಯನಿರ್ವಹಿಸಿದ್ದರು.
ಸಿ.ಎಂ.ನಾಗರಾಜ್ ನಿಧನಕ್ಕೆ ವಿಧಾನಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ,ಮಾಜಿ ಮೇಯರ್ ರಾಮಚಂದ್ರಪ್ಪ,ಪಾಲಿಕೆ ಮಾಜಿ ಸದಸ್ಯ ಎಂ.ನಾಗರಾಜ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
(ದಟ್ಸ್‌ಕನ್ನಡ ವಾರ್ತೆ)


Click it and Unblock the Notifications
