ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೇಪಾಳದ ಅಧಿಕಾರ ಚುಕ್ಕಾಣಿ ಹಿಡಿದ ಪ್ರಚಂಡ

By Staff
|
Google Oneindia Kannada News

Nepal PM Pranchandaಕಠ್ಮಂಡು, ಆ. 18 : ನೇಪಾಳ ಕಮ್ಯುನಿಸ್ಟ್ ಪಾರ್ಟಿ (ಮಾವೋವಾದಿ) ಚೇರಮನ್ ಪುಷ್ಟ ಕಮಲ್ ದಾಹಲ್ ಅಲಿಯಾಸ್ ಪ್ರಚಂಡ ನೇಪಾಳದ ನೂತನ ಪ್ರಧಾನಮಂತ್ರಿಯಾಗಿ ಸೋಮವಾರ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಮೂಲಕ ಫೆಡರಲ್ ರಿಪಬ್ಲಿಕ್ ಆಫ್ ನೇಪಾಳ ಪಕ್ಷದ ಮೊದಲ ಪ್ರಧಾನಮಂತ್ರಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಲಿದ್ದಾರೆ.

ಇಂದು ಮಧ್ಯಾಹ್ನ ನೇಪಾಳದ ರಾಷ್ಟ್ರಪತಿ ಭವನದ ಶೀತಲ್ ನಿವಾಸದಲ್ಲಿ ಏರ್ಪಡಿಸಲಾಗಿರುವ ಭವ್ಯ ಸಮಾರಂಭದಲ್ಲಿ ರಾಷ್ಟ್ರಪತಿ ರಾಮ್ ಬಾರನ್ ಯಾದವ್ ಅವರು ಪ್ರಚಂಡ ಅವರಿಗೆ ಅಧಿಕಾರದ ಗೌಪ್ಯತೆಯ ಪ್ರಮಾಣ ವಚನ ಬೋಧಿಸುವರು. ಪ್ರಮಾಣ ವಚನ ಕಾರ್ಯಕ್ರಮಕ್ಕೆ ದೇಶದ ಅನೇಕ ಗಣ್ಯರು, ಹಿರಿಯ ರಾಜಕಾರಣಿಗಳು, ವಿವಿಧ ಕ್ಷೇತ್ರದಲ್ಲಿ ಹೆಸರು ಮಾಡಿರುವ ಪ್ರತಿಷ್ಠಿತರು ಭಾಗವಹಿಸಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರಪತಿ ಭವನದ ಸುತ್ತಮುತ್ತ ಭಾರಿ ಸಂಖ್ಯೆಯಲ್ಲಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಸ್ಥಳದಲ್ಲಿ ಬೀಡುಬಿಟ್ಟಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ನೇಪಾಳ ದೇಶವು ಸಂಸತ್ತು 577 ಸದಸ್ಯರನ್ನು ಹೊಂದಿದೆ. ಕಳೆದ ಶುಕ್ರವಾರ ನಡೆದ ಪ್ರಧಾನಮಂತ್ರಿ ಆಯ್ಕೆಯ ಚುನಾವಣೆಯಲ್ಲಿ ಪ್ರಚಂಡ ಅವರು 464 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದರು. ತಮ್ಮ ಪ್ರತಿಸ್ಪರ್ಧಿ ನೇಪಾಳ ಕಾಂಗ್ರೆಸ್ ನ ಶೇರ್ ಬಹಾದ್ದೂರ್ ದೇಬು ಅವರು ಕೇವಲ 113 ಮತಗಳನ್ನು ಮಾತ್ರ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಪ್ರಚಂಡ ಅವರ ಕಮ್ಯುನಿಸ್ಟ್ ಪಾರ್ಟಿ ಆಫ್ ನೇಪಾಳ ಪಕ್ಷಕ್ಕೆ ಯುನಿಫೈಡ್ ಮಾಕ್ಸಿಸ್ಟ್ ಲೆನಿನಿಷ್ಟ್ ಪಕ್ಷ ಹಾಗೂ ಮಾದೇಶ್ ಜನಾಧಿಕಾರ ಫೋರಂ ಪಕ್ಷಗಳು ಬೆಂಬಲ ನೀಡಿದ್ದವು. ಪ್ರಚಂಡ ಸಚಿವ ಸಂಪುಟದಲ್ಲಿ 23 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X