ಆ.20ರಂದು ಬೆಂಗಳೂರು ರಸ್ತೆ ಆಟೋ ಮುಕ್ತ
ಬೆಂಗಳೂರು, ಆ. 19 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬುಧವಾರ ಆಗಸ್ಟ್ 20ರಂದು ಬೆಂಗಳೂರು ಆಟೋ ಚಾಲಕರ ಸಂಘ ಒಂದು ದಿನದ ಮುಷ್ಕರಕ್ಕೆ ಕರೆ ನೀಡಿದೆ.
ಆಟೋ ಬಂದ್ ಕರೆ ನೀಡಿರುವುದರಿಂದ ನಗರದಲ್ಲಿ ಸಂಚರಿಸುವ ಸುಮಾರು 80 ಸಾವಿರ ಪರವಾನಿಗೆ ಪಡೆದಿರುವ ಹಾಗೂ 20 ಸಾವಿರ ಪರವಾನಿಗೆ ಪಡೆಯದಿರುವ ಅಟೋಗಳು ನಾಳೆ ರಸ್ತೆಗಿಳಿಯುವುದಿಲ್ಲ ಎಂದು ಅಟೋ ಚಾಲಕರ ಸಂಘ ಸ್ಪಷ್ಟಪಡಿಸಿದೆ.
ಸಂಚಾರಿ ಪೊಲೀಸರ ಕಿರುಕುಳ, ಚಾಲಕರಿಗೆ ಜೀವನಾಂಶ, ಇಎಸ್ಐ ಸೌಲಭ್ಯ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆಟೋ ಚಾಲಕರು ಮುಷ್ಕರ ನಡೆಸಲಿದ್ದಾರೆ. ಬೆಂಗಳೂರಿನ ಆಟೋ ಚಾಲಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಅವರ ಜೀವನಮಟ್ಟ ಸುಧಾರಿಸಬೇಕು. ಎಷ್ಟು ದುಡಿದರೂ ಕಷ್ಟ ತಪ್ಪುತ್ತಿಲ್ಲ ಎಂಬುದು ಆಟೋ ಚಾಲಕರ ಅಳಲು.
ಆಟೋ ಚಾಲಕರ ಪ್ರಮುಖ ಬೇಡಿಕೆಗಳು
* ಕಿರುಕುಳ ನೀಡದಂತೆ ಸಂಚಾರಿ ಪೊಲೀಸರ ಮೇಲೆ ನಿಯಂತ್ರಣ.
* ವಶಪಡಿಸಿಕೊಂಡಿರುವ 40 ಸಾವಿರ ಎಕರೆ ಭೂಮಿಯಲ್ಲಿ ಆಟೋ ಚಾಲಕರಿಗೆ ವಸತಿ ಸಮುಚ್ಚಯ ನಿರ್ಮಾಣ.
* ಚಾಲಕರ ಮಕ್ಕಳಿಗೆ ಉನ್ನತ ಶಿಕ್ಷಣ ಸೌಲಭ್ಯ.
* ಪರವಾನಗಿ ಇರುವ ಆಟೋ ಚಾಲಕರಿಗೆ ಜೀವನಾಂಶ.
* ಚಾಲಕರ ಕುಟುಂಬಕ್ಕೆ ಇಎಸ್ಐ ಸೌಲಭ್ಯ.
ಆಟೋ ಚಾಲಕರ ಒಂದು ದಿನದ ಬಂದ್ ಹಿನ್ನೆಲೆಯಲ್ಲಿ ಬುಧವಾರ ಬೆಂಗಳೂರಿನಲ್ಲಿ ಅಟೋಗಳು ರಸ್ತೆಗಿಳಿಯುವುದಿಲ್ಲ. ಇದರಿಂದ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಸ್ವಾಭಾವಿಕವಾಗಿ ಕಡಿಮೆಯಾಗಲಿದೆ. ಆಟೋ ಇಲ್ಲದಿರುವುದು ಸಾರ್ವಜನಿಕರು ತೊಂದರೆ ಅನುಭವಿಸುವ ಸಾಧ್ಯತೆಗಳಿವೆ.
(ದಟ್ಸ್ ಕನ್ನಡ ವಾರ್ತೆ)
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications