ಒಲಿಂಪಿಕ್ಸ್ :ಲಾಂಗ್ ಜಂಪ್ ಪಟು ಅಂಜು ಹೊರಕ್ಕೆ
ಬೀಜಿಂಗ್, ಆ. 19 : ಭಾರತೀಯ ಭರವಸೆಯ ಲಾಂಗ್ ಜಂಪ್ ಪಟು ಅಂಜು ಬಾಬ್ಬಿ ಜಾರ್ಜ್ ಫೈನಲ್ ತಲುಪುವಲ್ಲಿ ವಿಫಲರಾಗಿ ಒಲಿಂಪಿಕ್ಸ್ ಕ್ರೀಡಾಕೂಟದಿಂದ ಹೊರಬಿದ್ದು ಭಾರತೀಯ ಕ್ರೀಡಾ ಪ್ರೇಮಿಗಳಿಗೆ ಭಾರಿ ನಿರಾಶೆ ಮೂಡಿಸಿದ್ದಾರೆ.
ಭಾರಿ ಭರವಸೆಯೊಂದಿಗೆ ಬೀಜಿಂಗ್ ತೆರಳಿದ್ದ ಭಾರತೀಯ ಕ್ರೀಡಾಪಟುಗಳು ನಿರೀಕ್ಷಿತ ಮಟ್ಟದಲ್ಲಿ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಭಾರತಕ್ಕೆ ಇನ್ನೊಂದು ಪದಕದ ಆಸೆಯ ಭರವಸೆಯನ್ನು ನೀಡಿದ್ದ ಬಾಕ್ಸರ್ ಅಖಿಲ್ ಕುಮಾರ್ ಅವರು ಮಾಲ್ಡೋವ್ ನ ವಿಸಸ್ಲಾವ್ ಅವರೊಂದಿಗೆ ಸೋಲುವ ಮೂಲಕ ನಿರಾಶೆ ಮೂಡಿಸಿದ್ದರು.
ಇಂದು ಮತ್ತೆ ಭಾರತೀಯ ಆಟಗಾರರ ನೀರಸ ಪ್ರದರ್ಶನ ಮುಂದುವರೆದಿದ್ದು, ಅಂಜು ಜಾರ್ಜ್ ಅವರು ಲಾಂಗ್ ಜಂಪ್ ಪಂದ್ಯದಲ್ಲಿ ಆರಂಭಿಕ ಮೂರು ಅವಕಾಶಗಳಲ್ಲಿ ಮೂರರಲ್ಲಿಯೂ ಫೌಲ್ ಮಾಡುವ ಸ್ಪರ್ಧೆಯಲ್ಲಿ ಹಿನ್ನೆಡೆ ಅನುಭವಿಸಿದರು. ಅಂಜು ಜಾರ್ಜ್ ಅವರು 2003ರಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ನಲ್ಲಿ ಬೆಳ್ಳಿ ಪದಕ ಪಡೆದಿದ್ದರು. ಈ ಮೂಲಕ ಅಭಿನವ್ ಬಿಂದ್ರಾ ಅವರ ಚಿನ್ನ ಹೊರತುಪಡಿಸಿ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಇಲ್ಲಿಯವರೆಗೂ ಯಾವ ಪದಕಗಳು ಭಾರತಕ್ಕೆ ದಕ್ಕಿಲ್ಲ. ಕುಸ್ತಿ ಪಂದ್ಯದಲ್ಲಿ ಭಾರತದ ಯೋಗೇಶ್ವರ್ ದತ್ತಾ ಜಪಾನಿನ ಎದುರಾಳಿಯ ವಿರುದ್ಧ ಸೋಲುಂಡಿದ್ದಾರೆ. ಉಳಿದಂತೆ ಪುರುಷರ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಕಮಲ್ ಎರಡನೇ ಸುತ್ತು ಪ್ರವೇಶಿಸಿ ಭರವಸೆ ಮೂಡಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಒಲಿಂಪಿಕ್ಸ್ :ಬಾಕ್ಸರ್ ಅಖಿಲ್ ಕುಮಾರ್ ಗೆ ಸೋಲು
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications