Get Updates
Get notified of breaking news, exclusive insights, and must-see stories!

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ : ಯಡಿಯೂರಪ್ಪ

ಬೆಂಗಳೂರು, ಆ. 19 : ಮುಂಬರುವ ವಿಧಾನಸಭೆ ಉಪಚುನಾವಣೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಅತಿ ಹೆಚ್ಚಿನ ಸ್ಥಾನ ಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಅನೇಕ ಭರವಸೆಗಳನ್ನು ಅಧಿಕಾರಕ್ಕೆ ಬಂದ ಎರಡು ತಿಂಗಳೊಳಗೆ ಕಾರ್ಯಗತಗೊಳಿಸಿದೆ. ಈ ಹಿನ್ನೆಲೆಯಲ್ಲಿ ಜನತೆ ಬಿಜೆಪಿಗೆ ಮತ ನೀಡಲಿದ್ದಾರೆ ಎಂದರು. ಪಕ್ಷಾಂತರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಮುಖಂಡರು ಯಾವ ಶಾಸಕರನ್ನು ಬಲವಂತದ ಮೂಲಕ ಪಕ್ಷಕ್ಕೆ ಆಹ್ವಾನಿಸುತ್ತಿಲ್ಲ. ಬಿಜೆಪಿ ಪಕ್ಷದ ತತ್ವ , ಸಿದ್ಧಾಂತದಲ್ಲಿ ನಂಬಿಕೆ ಇರುವವರು ಪಕ್ಷ ಸೇರಬಹುದು ಎಂದು ಹೇಳಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮಾತನಾಡಿ, ಅಮರನಾಥ ಭೂವಿವಾದವನ್ನು ಬಗೆಹರಿಸುವಲ್ಲಿ ಕೇಂದ್ರದ ಯುಪಿಎ ಸಂಪೂರ್ಣ ವಿಫಲವಾಗಿದೆ. ಅಲ್ಲದೆ ದೇಶದಲ್ಲಿ ಅನೇಕ ಭಾಗದಲ್ಲಿ ಉಗ್ರರ ಅಟ್ಟಹಾಸ ಮುಂದುವರದಿದೆ. ಯುಪಿಎ ಆಡಳಿತದಲ್ಲಿ ಹೈದರಾಬಾದ್, ಜೈಪುರ, ಬೆಂಗಳೂರು, ಅಹಮದಾಬಾದ್ ಹೀಗೆ ಇನ್ನೂ ಅನೇಕ ಸರಣಿ ಬಾಂಬ್ ಸ್ಫೋಟಗೊಂಡಿವೆ. ಇಷ್ಟಾದರೂ ಕೂಡಾ ಕೇಂದ್ರ ಸರ್ಕಾರ ಇದನ್ನು ತಡೆಯುವಲ್ಲಿ ಅಗತ್ಯ ಕ್ರಮಗಳನ್ನು ಕೈಗೊಂಡಿಲ್ಲ. ಮತಗಳ ಗಳಿಸುವ ಒಂದೇ ಉದ್ದೇಶದಿಂದ ಉಗ್ರರನ್ನು ನಿಗ್ರಹಿಸುವಂಥ ಶಕ್ತಿ ಇರುವ ಪೋಟಾ ಕಾಯ್ದೆಯನ್ನು ಜಾರಿಗೆ ತರಲು ಮೀನಮೇಷ ಎಣಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಂಬರುವ ರಾಜ್ಯದ ಉಪಚುನಾವಣೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಲಿದೆ ಎಂದು ವಿಶ್ವಾಸದಿಂದ ನುಡಿದರು.

ಮುಂಬರುವ ವಿಧಾನಸಭೆ ಉಪಚುನಾವಣೆ ಮತ್ತು ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪಕ್ಷ ಬಲವರ್ಧನೆ ಸೇರಿದಂತೆ ಅನೇಕ ವಿಷಯಗಳನ್ನು ಕಾರ್ಯಕಾರಿಣಿ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್, ಪಕ್ಷದ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದಗೌಡ ಸೇರಿದಂತೆ ಸಂಪುಟದಲ್ಲಿರುವ ಬಿಜೆಪಿ ಸಚಿವರು ಸಭೆಯಲ್ಲಿ ಭಾಗವಹಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)
ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ: ಯಡಿಯೂರಪ್ಪ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+