ಸಿಸಿಬಿ ಬಲೆಗೆ ಬಿದ್ದ ವನ್ಯಜೀವಿ ಚರ್ಮ ಮಾರಾಟ ಜಾಲ
ಬೆಂಗಳೂರು, ಆ.19: ನಗರದ ಪೊಲೀಸರು ಸೋಮವಾರ ವನ್ಯಜೀವಿಗಳ ಚರ್ಮವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಬಂಧಿಸಿದ್ದಾರೆ.
ನಗರದ ಹೊರವಲಯದಲ್ಲಿ ಬಂಧಿತರು ಸುಮಾರು 15 ಲಕ್ಷ ರು ಮೌಲ್ಯದ ಎರಡು ಹುಲಿ ಚರ್ಮವನ್ನು ಮಾರಾಟದಲ್ಲಿ ತೊಡಗಿದ್ದರು ಎನ್ನಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ನಗರದ ಅಪರಾಧಿ ವಿಭಾಗ (ಕೇಂದ್ರ) ಪೊಲೀಸರ(ಸಿಸಿಬಿ)ತಂಡ ಮೂವರನ್ನು ಸೆರೆ ಹಿಡಿದು, ಹುಲಿ ಚರ್ಮಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರಲ್ಲಿ ಒಬ್ಬನನ್ನು ತಮಿಳುನಾಡಿನ ಕೃಷ್ಣಗಿರಿ ಮೂಲದ ಎಸ್ ಕೋದಂಡಪಾಣಿ ಎಂದು ಗುರುತಿಸಲಾಗಿದೆ. ಉಳಿದವರಾದ ಪಿ. ವೆಂಕಟಸ್ವಾಮಿ ಹಾಗೂ ಎಂ. ಡೇವಿಡ್ ಕುಮಾರ್ ಅವರನ್ನು ಸ್ಥಳೀಯರೆಂದು ಹೇಳಲಾಗಿದೆ. ನಗರದ ಹೊರವಲಯದ ಚಂದಾಪುರ ಸಮೀಪದ ಧಾಬಾವೊಂದರಿಂದ ಹುಲಿಚರ್ಮವನ್ನು ಗಳಿಸಿದ್ದಾಗಿ ಬಂಧಿತರು ಹೇಳಿದ್ದಾರೆ, ತನಿಖೆ ಜಾರಿಯಲ್ಲಿದೆ ಎಂದು ಪೊಲೀಸರು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
ಶಿವಮೊಗ್ಗ: ಹಕ್ಕಿಪಿಕ್ಕಿಗಳ ಸೆರೆ, ಪ್ರಾಣಿಗಳ ಚರ್ಮ ವಶ
More From
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications