ಪ್ಲಾಸ್ಟಿಕ್ ಮುಕ್ತ ನಂದಿಬೆಟ್ಟಕ್ಕೆಟೊಂಕ ಕಟ್ಟಿದ ಟೆಕ್ಕಿಗಳು
ಬೆಂಗಳೂರು, ಆ.19: ಪ್ಲಾಸ್ಟಿಕ್ ಮತ್ತಿತರ ಕಸ-ಕಡ್ಡಿಯಿಂದ ಕಲುಷಿತವಾಗುತ್ತಿರುವ ನಂದಿ ಗಿರಿಧಾಮವನ್ನು ರಕ್ಷಿಸಲು 'ಕ್ಲೀನ್ ಅಂಡ್ ಗ್ರೀನ್' ಎಂಬ ಸ್ವಯಂ ಸೇವಾ ಸಂಸ್ಥೆ 'ಕ್ಲೀನ್ ನಂದಿ-ಗ್ರೀನ್ ನಂದಿ'ಎಂಬ ವಿಶಿಷ್ಟ ಅಭಿಯಾನವನ್ನು ಆ.24ರಿಂದ ಆರಂಭಿಸಲಿದೆ.
ನಂದಿ ಗಿರಿಧಾಮದಲ್ಲಿ ಪರಿಸರಕ್ಕೆ ಹಾನಿ ಉಂಟು ಮಾಡುತ್ತಿರುವ ಪ್ಲಾಸ್ಟಿಕ್ ಮತ್ತಿತರ ಕಸ ಕಡ್ಡಿಯನ್ನು ಹೆಕ್ಕಿ ಸ್ವಚ್ಛ ಮಾಡಲು ಆ.24ರಿಂದ ಪ್ರತಿ ಶನಿವಾರ ಮತ್ತು ಭಾನುವಾರಗಳಿಂದ 10 ಸಾವಿರಕ್ಕೂ ಅಧಿಕ ಸ್ವಯಂ ಸೇವಕರು ಆಗಮಿಸಲಿದ್ದಾರೆ. ಪ್ಲಾಸ್ಟಿಕ್ ಚೀಲ/ಬಾಟಲಿ, ಐಸ್ ಕ್ರೀಂ ಕಪ್, ಗುಟ್ಕಾ ಮತ್ತು ಸಿಗರೇಟ್ ಪ್ಯಾಕೆಟ್‌ಗಳನ್ನು ಹೆಕ್ಕಿ ತೆಗೆಯುವ ಅಭಿಯಾನದಲ್ಲಿ ನೂರಾರು ಸಾಫ್ಟ್‌ವೇರ್ ಇಂಜಿನಿಯರ್‌ಗಳು ಭಾಗವಹಿಸುತ್ತಿರುವುದು ವಿಶೇಷ.
ಈ ಕುರಿತು ಕಾರ್ಯಕ್ರಮದ ಆಯೋಜಕ ದೀಪಕ್ ಮಾತನಾಡುತ್ತಾ, ಮೊದಲು ಇಂತಿಷ್ಟು ತಂಡಗಳನ್ನು ರಚಿಸುತ್ತೇವೆ. ನಂತರ ಸ್ಥಳಗಳನ್ನು ನಿಗದಿ ಮಾಡಿ ಪ್ರತಿ ತಂಡಕ್ಕು ಗೋಣಿ ಚೀಲ ಕೈಗವಸು ಕೊಡುತ್ತೇವೆ. ಪ್ಲಾಸ್ಟಿಕ್ ತೆಗೆಯುವುದರ ಜೊತೆಗೆ ಅಲ್ಲಿನ ಪ್ರವಾಸಿಗರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ನಂದಿ ಬೆಟ್ಟದಲ್ಲಿ ಸಂಗ್ರಹಿಸಿದ ಪ್ಲಾಸ್ಟಿಕನ್ನು ಬೆಂಗಳೂರಿನ ಕೆ.ಕೆ. ಪ್ಲಾಸ್ಟಿಕ್ ಸಂಸ್ಥೆಗೆ ಒಪ್ಪಿಸಲಾಗುತ್ತದೆ. ಇದನ್ನು ಡಾಂಬರಿನೊಂದಿಗೆ ಮಿಶ್ರಣ ಮಾಡಿ ರಸ್ತೆಗೆ ಬಳಸಲಾಗುತ್ತದೆ . ಹಾಗೆಯೇ ನಂದಿ ಗಿರಿಧಾಮದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವರ ನೀಡಿದರು.
ಈ ಅಭಿಯಾನದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ, ಅರಣ್ಯ ಇಲಾಖೆ, ಯುವಜನ ಸೇವಾ ಇಲಾಖೆ ಸಿಬ್ಬಂದಿ ಭಾಗವಹಿಸಲಿದ್ದಾರೆ. ಹೈಕೋರ್ಟ್‌ನ ಕೆಲವು ವಕೀಲರು ಕೈಜೋಡಿಸಿ ಸಹಕರಿಸಲಿದ್ದಾರೆ. ಅಭಿಯಾನದಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತರು ದೀಪಕ್ ಅವರನ್ನು 99809 40872 ಮೊಬೈಲ್ ಸಂಖ್ಯೆಯ ಮೂಲಕ ಸಂಪರ್ಕಿಸಬಹುದು.
(ದಟ್ಸ್‌ಕನ್ನಡ ವಾರ್ತೆ)
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications