ಇನ್ನು ಮುಂದೆ ಕೇವಲ 60 ದಿನಗಳಲ್ಲಿ ಎಲ್ಪಿಜಿ ಸಂಪರ್ಕ
ನವದೆಹಲಿ,ಆ.19: ಹೊಸ ಅಡುಗೆ ಅನಿಲ(ಎಲ್ಪಿಜಿ) ಸಂಪರ್ಕ ಪಡೆದುಕೊಳ್ಳುವ ಗ್ರಾಹಕರನ್ನು 60 ದಿನಗಳಿಗಿಂತಲೂ ಹೆಚ್ಚು ಕಾಲ ಕಾಯಿಸುವಂತಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ತೈಲ ಮಾರುಕಟ್ಟೆ ಕಂಪನಿಗಳಿಗೆ ಆದೇಶಿಸಿದೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಪೆಟ್ರೋಲಿಯಂ ಕಾರ್ಯದರ್ಶಿ ಆರ್.ಎಸ್.ಪಾಂಡೆ ಈ ವಿಷಯವನ್ನು ಸುದ್ದಿಗಾರರು ಹಾಗೂ ತೈಲ ಕಂಪನಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ತಿಳಿಸಿದರು.
ದೇಶದಲ್ಲಿ ಅಡುಗೆ ಅನಿಲದ ಲಭ್ಯತೆ ಹಾಗೂ ಇನ್ನೇನು ಶುರುವಾಗಲಿರುವ ಹಬ್ಬದ ಸಾಲುಗಳನ್ನು ಗಮನದಲ್ಲಿಟ್ಟುಕೊಂಡು ಗ್ರಾಹಕರಿಗೆ ನಿಗದಿತ 60 ದಿನಗಳ ಅವಧಿಯಲ್ಲಿ ಅಡುಗೆ ಅನಿಲ ಪೂರೈಸುವಂತೆ ಕಂಪನಿಗಳಿಗೆ ಸೂಚಿಸಲಾಗಿದೆ.ಮುಂದಿನ ಎರಡು ವಾರಗಳಲ್ಲಿ ಸಾರ್ವಜನಿಕ ದೂರುಗಳನ್ನು ಸ್ವೀಕರಿಸುವ ಪದ್ಧತಿಯನ್ನು ರಾಷ್ಟ್ರ,ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಸ್ಥಾಪಿಸಲಾಗುತ್ತದೆ ಎಂದು ಪಾಂಡೆ ಹೇಳಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಕೇಂದ್ರ ಪೆಟ್ರೊಲಿಯಂ ಸಚಿವ ಮುರಲಿ ಡಿಯೊರಾ ಮಾತನಾಡುತ್ತಾ, ಹಬ್ಬಗಳ ಸಂಭ್ರಮ ಶುರುವಾಗುತ್ತಿರುವ ಕಾರಣ ಅಡುಗೆ ಅನಿಲವನ್ನು ಸಮರ್ಪಕವಾಗಿ ವಿತರಿಸುವಂತೆ ಕ್ರಮಕೈಗೊಂಡಿದ್ದೇವೆ. ದೇಶದ ವಿವಿಧ ಭಾಗಗಳಲ್ಲಿ ಲಭ್ಯವಿರುವ ಪೆಟ್ರೊಲಿಯಂ ಉತ್ಪನ್ನಗಳನ್ನು ಖಾತ್ರಿಪಡಿಸಿಕೊಳ್ಳುವಂತೆ ತೈಲ ಕಂಪನಿಗಳಿಗೆ ಆದೇಶಿಸಲಾಗಿದೆ ಎಂದರು.
ಸಭೆಯಲ್ಲಿ ಪೆಟ್ರೊಲಿಯಂ ಸಚಿವಾಲಯದ ಉನ್ನತಾಧಿಕಾರಿಗಳು, ಒಎನ್ಜಿಸಿ,ಜಿಎಐಎಲ್,ಬಿಪಿಸಿಎಲ್,ಎಚ್ಪಿಸಿಎಲ್ ತೈಲ ಕಂಪನಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.
(ಯುಎನ್ಐ)
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications