ಹೊಗೇನಕಲ್ ತಮಿಳುನಾಡಿನಅವಿಭಾಜ್ಯ ಅಂಗ :ತ್ರಿಪಾಠಿ
ಚೆನ್ನೈ, ಆ. 19 : ಹೊಗೇನಕಲ್ ವಿವಾದ ಕಗ್ಗಂಟಾಗಿರುವ ಬೆನ್ನಲ್ಲೇ ಹೊಗೇನಕಲ್ ಜಲಾಶಯ ತಮಿಳುನಾಡಿನ ಅವಿಭಾಜ್ಯ ಅಂಗ ಎಂದು ತಮಿಳುನಾಡು ಸರ್ಕಾರ ಮುಖ್ಯ ಕಾರ್ಯದರ್ಶಿ ಎಲ್.ಕೆ. ತ್ರಿಪಾಠಿ ಹೇಳಿದ್ದಾರೆ.
ನಗರದ ಜಪಾನ್ ರಾಯಭಾರಿ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಛಾಯಾಚಿತ್ರ ಮೇಳವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಜಪಾನ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿರುವ 1334 ಕೋಟಿ ರುಪಾಯಿಗಳ ಹೊಗೇನಕಲ್ ಕುಡಿಯುವ ನೀರಿನ ಯೋಜನೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು ಎಂದರು. ಧರ್ಮಪುರಿ ಮತ್ತು ಕೃಷ್ಣಗಿರಿ ಜಿಲ್ಲೆಗಳ ಜನರು ಫ್ಲೋರೈಡ್ ಮಿಶ್ರಿತ ನೀರನ್ನು ಕುಡಿಯುತ್ತಿರುವುದರಿಂದ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಫ್ಲೋರೈಡ್ ನೀರು ಮನುಷ್ಯರ ದೇಹಕ್ಕೆ ಹಾನಿಕರವಾಗಿದ್ದು, ಇನ್ನು ಕೆಲವೆ ವರ್ಷಗಳಲ್ಲಿ ಈ ಭಾಗದ ಜನರಿಗೆ ಕಾವೇರಿ ನೀರು ಕುಡಿಯುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಒಟ್ಟು 1.4 ಟಿಎಂಸಿ ನೀರನ್ನು ಜಲಾಶಯದಲ್ಲಿ ನಿಲ್ಲಿಸಲಾಗುವುದು. ಇದರಿಂದ ಸುಮಾರು 30 ಲಕ್ಷ ಜನರು ಇದರ ಲಾಭವಾಗಲಿದೆ ಎಂದು ತ್ರಿಪಾಠಿ ಸ್ಪಷ್ಟಪಡಿಸಿದರು.
ಹೊಗೇನಕಲ್ ತಮಿಳಿನಾಡಿಗೆ ಸಂಬಂಧಿಸಿದ್ದು ಎನ್ನುವ ವಿಷಯ ಕರ್ನಾಟಕಕ್ಕೆ ಗೊತ್ತಿದ್ದರೂ ಕೂಡಾ ಅನಗತ್ಯ ತಕರಾರು ಮಾಡತೊಡಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಹೊಗೇನಕಲ್ ಜಲಾಶಯ ತಮಿಳುನಾಡಿಗೆ ಸೇರಿದ್ದು ಎನ್ನುವ ಸ್ಪಷ್ಟವಾದ ದಾಖಲೆಯನ್ನು ನೀಡಲು ನಾವು ಸಿದ್ಧ ಎಂದು ಹೇಳಿದರು. ಕೆಲ ರಾಜಕೀಯ ವ್ಯಕ್ತಿಗಳು, ಸಂಘ ಸಂಸ್ಥೆಗಳು ಹಾಗೂ ಮಾಧ್ಯಮಗಳಿಂದ ವಿವಾದ ಮತ್ತಷ್ಟು ಕಗ್ಗಂಟಾಗಿದೆ. ಇದರಿಂದಾಗಿ ಯೋಜನೆಯ ಹಿನ್ನೆಡೆ ಕಾರಣವಾಗಿದೆ ಎಂದು ಅರೋಪಿಸಿದರು. ಜಪಾನ್ ಸಹಯೋಗದಲ್ಲಿ ಆರಂಭಿಸಲಾಗಿರುವ ಯೋಜನೆಯನ್ನು ಯಾವ ಕಾರಣಕ್ಕೂ ಕೈಬಿಡುವ ಪ್ರಶ್ನೆಯೇ ಇಲ್ಲ. ರಾಜ್ಯದ ಅವಿಭಾಜ್ಯ ಅಂಗವಾಗಿರುವ ಹೊಗೇನಕಲ್ ಯೋಜನೆಯನ್ನು ಜಾರಿಗೊಳಿಸುವುದು ಖಚಿತ ಎಂದು ತ್ರಿಪಾಠಿ ಸ್ಪಷ್ಟಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)
'ಹೊಗೆ' ಜಂಟಿ ಸಮೀಕ್ಷೆಗೆ ಯಡಿಯೂರಪ್ಪ ಆಗ್ರಹ
ಹೊಗೆ ಹಗೆ ನಿಲ್ಲಿಸಲು ದೆಹಲಿ ತನಕ ದೂರು
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications