ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೇಷಾವರದಲ್ಲಿ ಬಾಂಬ್ ಸ್ಫೋಟ : 20 ಸಾವು

By Staff
|
Google Oneindia Kannada News

ಪೇಷಾವರ, ಆ. 19 : ನಗರದ ಆಸ್ಪತ್ರೆಯೊಂದರ ಆವರಣದಲ್ಲಿ ಪ್ರಬಲ ಬಾಂಬ್ ಸ್ಫೋಟಗೊಂಡಿದ್ದರಿಂದ 20 ಜನರು ಮೃತಪಟ್ಟು ಹಲವರು ಗಾಯಗೊಂಡಿರುವ ದುರ್ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ದೇರಾ ಇಸ್ಮಾಯಿಲ್ ಖಾನ್ ಪ್ರದೇಶದಲ್ಲಿರುವ ಆಸ್ಪತ್ರೆಯೊಂದರ ಮುಂಭಾಗದಲ್ಲಿ ಶಿಯಾ ಜನಾಂಗಕ್ಕೆ ಸೇರಿದ ಜನರು ಪ್ರತಿಭಟನೆ ನಡೆಸುತ್ತಿದ್ದರು. ಇದ್ದಕ್ಕಿದ್ದ ಹಾಗೆ ಬಾಂಬ್ ಸ್ಫೋಟಗೊಂಡಿದೆ. ಘಟನೆಯಲ್ಲಿ 20ಕ್ಕೂ ಜನರು ಗಾಯಗೊಂಡಿದ್ದಾರೆ. ಸ್ಫೋಟಗೊಂಡಿರುವುದು ಮಾನವ ಬಾಂಬ್ ಅಥವಾ ಸುಧಾರಿತ ಸಾಮಗ್ರಿಗಳನ್ನು ಬಳಿಸಿ ಸ್ಫೋಟಗೊಳಿಸಲಾಗಿದೆ ಎನ್ನುವ ಬಗ್ಗೆ ಸ್ಪಷ್ಟವಾದ ಮಾಹಿತಿ ದೊರೆತಿಲ್ಲ. ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸ್ಫೋಟಕ್ಕಿಂತ ಪೂರ್ವದಲ್ಲಿ ಪ್ರತಿಭಟನಾಕಾರ ಮುಖಂಡರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ನಿನ್ನೆಯಷ್ಟೆ ರಾಷ್ಟ್ರ ರಾಜಕಾರಣ ಗಮನಾರ್ಹ ಬದಲಾವಣೆಯಾಗಿದ್ದು, ಕಳೆದ ಒಂಬತ್ತು ವರ್ಷಗಳಿಂದ ಪಾಕಿಸ್ತಾನದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಪರ್ವೇಜ್ ಮುಷರಫ್ ರಾಜೀನಾಮೆ ನೀಡಿದ್ದರು. ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ದೇಶದ ಅನೇಕ ಕಡೆ ಜನರು ವಿಜಯೋತ್ಸವ ಆಚರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಗುರಿಯಾಗಿಸಿಕೊಂಡು ಬಾಂಬ್ ಸ್ಫೋಟಿಸಿರುವುದು ತೀವ್ರ ಆತಂಕ ಉಂಟು ಮಾಡಿದೆ.

(ದಟ್ಸ್ ಕನ್ನಡ ವಾರ್ತೆ)

ಮುಷರಫ್ ರನ್ನು ಜೀವ ಸಹಿತ ಬಿಡೆವು :ಅಲ್ ಖೈದಾ
ಲಂಡನ್ ನಲ್ಲಿ ಆಶ್ರಯ ಪಡೆಯಲಿರುವ ಮುಷರಫ್

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X