ಉದ್ದೀಪನ ಮದ್ದು : ಮತ್ತೆ ಸಂಕಷ್ಟಕ್ಕೆ ಪಾಕ್ ವೇಗಿ
ಜಿನೆವಾ, ಆ. 19 : ಉದ್ದೀಪನ ಮದ್ದು ಸೇವನೆ ಆರೋಪವನ್ನು ಎದುರಿಸುತ್ತಿರುವ ಪಾಕಿಸ್ತಾನದ ವೇಗಿ ಮಹ್ಮದ್ ಆಸೀಫ್ ಅವರ ರಕ್ತದಲ್ಲಿ ನಿಷೇಧಿತ ಮದ್ದು ಇರುವುದು ಸಾಬೀತಾಗಿದೆ. ಈ ಮೂಲಕ ಆಸೀಫ್ ಕ್ರಿಕೆಟ್ ಜೀವನದ ಮೇಲೆ ಭಾರಿ ಪರಿಣಾಮ ಬೀರಿದ್ದು, ಕ್ರಿಕೆಟ್ ನಿಂದ ಆಜೀವ ನಿಷೇಧ ಹೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಮಂಗಳವಾರ ನಗರದಲ್ಲಿ ಆಸೀಫ್ ರಕ್ತ ಪರೀಕ್ಷೆ ನಡೆಸಲಾಗಿದ್ದು, ಅವರ ರಕ್ತದಲ್ಲಿ ಉದ್ದೀಪನ ಮದ್ದು ಇರುವುದು ಖಾತ್ರಿಯಾಗಿದೆ. ಎರಡೆರಡು ಭಾರಿ ರಕ್ತ ಪರೀಕ್ಷೆ ಮಾಡಿ ಉದ್ದೀಪನ ಸೇವನೆಯನ್ನು ಖಚಿತಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಕ್ರೀಡೆಯಲ್ಲಿ ಮೋಸ, ವಂಚನೆ ಮಾಡುವ ಆಟಗಾರರನ್ನು ರಕ್ಷಿಸುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಆಸೀಫ್ ಅವರಿಗೆ ಅಂತರಾಷ್ಟ್ರೀಯ ಕ್ರಿಕೆಟ್ ನಿಂದ ಆಜೀವ ನಿಷೇಧ ಹೇರುವ ಸಾಧ್ಯತೆಗಳಿವೆ ಎನ್ನಲಾಗಿದೆ. ಬ್ರಿಟನ್ ಸ್ಪೋರ್ಟ್ಸ್ ಮೆಡಿಶಿನ್ ತಜ್ಞ ಡಾ. ಗ್ರಾಹಂ ಅವರು ಆಸೀಫ್ ಅವರ ರಕ್ತ ಪರೀಕ್ಷೆ ನಡೆಸಿ ಉದ್ದೀಪನ ಮದ್ದು ಇರುವುದನ್ನು ಖಚಿತಪಡಿಸಿದ್ದಾರೆ.
ಭಾರತದಲ್ಲಿ ನಡೆದ ಐಪಿಎಲ್ ಕ್ರಿಕೆಟ್ ಮುಗಿದ ನಂತರ ದುಬೈ ಮೂಲಕ ಪಾಕಿಸ್ತಾನಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಉದ್ದೀಪನ ಮದ್ದು ಸೇವನೆ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗಿ 19 ದಿನ ಜೈಲು ವಾಸ ಅನುಭವಿಸಿದ್ದರು. ಆ ನಂತರ ಇವರ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಯಿತು.
(ದಟ್ಸ್ ಕನ್ನಡ ವಾರ್ತೆ)
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications