ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮರನಾಥ ವಿವಾದ ಮುಕ್ತಿಗೆ ಭದ್ರತಾ ಸಲಹೆಗಾರ ಭೇಟಿ

By Staff
|
Google Oneindia Kannada News

ಶ್ರೀನಗರ, ಆ. 20 : ಕಳೆದ ಒಂದು ತಿಂಗಳಿನಿಂದ ನಗರದಲ್ಲಿ ಹೊತ್ತಿ ಉರಿಯುತ್ತಿರುವ ಅಮರನಾಥ ಭೂವಿವಾದದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಮತುಕತೆ ನಡೆಸಲು ಪ್ರಧಾನಮಂತ್ರಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಎಂ.ಕೆ.ನಾರಾಯಣನ್ ಅವರು ಬುಧವಾರ ಎರಡು ದಿನಗಳ ಭೇಟಿ ನೀಡಿದ್ದಾರೆ.

ಎರಡು ದಿನಗಳ ಕಾಲ ನಗರದಲ್ಲಿ ತಂಗಲಿರುವ ಅವರು, ಹಿರಿಯ ಪೊಲೀಸ್ ಅಧಿಕಾರಿಗಳ ಮತ್ತು ಆಡಳಿತಕ್ಕೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಅಮರನಾಥ ಭೂವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸುವರು. ನಾರಾಯಣನ್ ಅವರೊಂದಿಗೆ ಕೇಂದ್ರ ಗುಪ್ತಚರ ಇಲಾಖೆಯ ನಿರ್ದೇಶಕ ಪಿ.ಸಿ.ಹವಾಲ್ದಾರ್ ಮತ್ತು ಮಧು ಗುಪ್ತಾ ನಗರಕ್ಕೆ ಆಗಮಿಸಿದ್ದಾರೆ. ನಾರಾಯಣನ್ ನಗರ ಭೇಟಿ ವಿಷಯ ತಿಳಿಯುತ್ತಿದ್ದಂತೆಯೇ ಆಗಮಿಸಿದ ನೂರಾರು ಕಾಶ್ಮೀರಿ ಜನರು ಅಮರನಾಥ ಭೂವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಬೇಕು. ಹಾಗೂ ಪ್ರಕರಣವನ್ನು ಶೀಘ್ರದಲ್ಲಿ ಇತ್ಯರ್ಥಪಡಿಸಬೇಕು ಎಂದು ಆಗ್ರಹಿಸಿದರು. ಇದೇ ಸಂದರ್ಭದಲ್ಲಿ ನಾರಾಯಣನ್ ಅವರು ಕಾಶ್ಮೀರಿ ಪ್ರತ್ಯೇಕತಾವಾದಿ ಮುಖಂಡರೊಂದಿಗೆ ಮಾತುಕತೆ ನಡೆಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಕಳೆದ ಒಂದು ತಿಂಗಳನಿಂದ ಅಮರನಾಥ ಭೂವಿವಾದ ಹಿಂಸಾಚಾರಕ್ಕೆ ಕಾರಣವಾಗಿದೆ. ಅಮರನಾಥ ದೇವಾಲಯಕ್ಕೆ ನೀಡಿದ್ದ ಭೂಮಿಯನ್ನು ಗುಲಾಮ್ ನಬಿ ಅಜಾದ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಭೂಮಿಯನ್ನು ಹಿಂದಕ್ಕೆ ಪಡೆದಿರುವುದು ಈ ಹಿಂಸಾಚಾರಕ್ಕೆ ಕಾರಣವಾಗಿದೆ. ಸುಮಾರು ಒಂದು ತಿಂಗಳಿನಿಂದ ಜಮ್ಮ, ಉಧಮ್ ಪುರ್, ಸಾಂಬಾ ಜಿಲ್ಲೆಗಳಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿತ್ತು. ಅಮರನಾಥ ಸಂಘರ್ಷ ಸಮಿತಿ ಮತ್ತು ಕಾಶ್ಮೀರಿ ಪ್ರತ್ಯೇಕತಾವಾದಿಗಳು ಅನೇಕ ಪರ ವಿರೋಧ ಪ್ರತಿಭಟನೆಗಳನ್ನು ನಡೆಸಿದ್ದಾರೆ. ಹಿಂಸಾಚಾರದಲ್ಲಿ ಅನೇಕರು ಮೃತಪಟ್ಟು, ನೂರಾರು ಜನರ ಗಾಯಗೊಂಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಜಮ್ಮು ಮತ್ತೆ ಹಿಂಸಾಚಾರ, ನಿಷೇಧಾಜ್ಞೆ, 5 ಸಾವು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X