ಕೆಡಬ್ಲ್ಯು ಕಾರ್ಮಿಕರಿಂದ ರಾಜಭವನ್ ಚಲೋ'

ಬೆಂಗಳೂರು,ಆ.20: ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ಹಾಗೂ ಬಾಡಿಗೆ ನಿಯಂತ್ರಣ ಕಾಯಿದೆಯನ್ನು ಪುನಃ ಜಾರಿಗೆ ತರಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಬುಧವಾರ ಕರ್ನಾಟಕ ಕಾರ್ಮಿಕರ ಸಂಘಟನೆ(ಕೆಡಬ್ಲ್ಯುಯು) 'ರಾಜಭನ್ ಚಲೋ' ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿದೆ.

ಸೀಮೆ‌ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡ ಕೂಲಿ ಕಾರ್ಮಿಕರು ಜೀವನ ನಡೆಸುವುದು ಕಷ್ಟವಾಗಿದೆ. ಅದರಲ್ಲೂ ಮುಖ್ಯವಾಗಿ ತಿಂಗಳಿಗೆ ಕೇವಲ 4 ಸಾವಿರ ರು. ಸಂಪಾದಿಸುವ ಕಾರ್ಮಿಕರು ತಮ್ಮ ಕುಟುಂಬಗಳನ್ನು ಪೋಷಿಸಲು ಒದ್ದಾಡುತ್ತಿದ್ದಾರೆ. ನ್ಯಾಯ ಬೆಲೆ ಅಂಗಡಿಗಳಿಂದ ಅವರಿಗೆ ಅಲ್ಪಸ್ವಲ್ಪ ಅನುಕೂಲವಾಗುತ್ತಿದೆ ಅಷ್ಟೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಇ.ಕೆ.ಎನ್.ರಾಜನ್ ಸುದ್ದಿಗಾರರಿಗೆ ತಿಳಿಸಿದರು.

ಹಣದುಬ್ಬರ ಇಷ್ಟೆಲ್ಲಾ ಏರುತ್ತಿದ್ದರೂ ರಾಜ್ಯ ಸರ್ಕಾರ ಮಾತ್ರ ಕಾರ್ಮಿಕರ ವೇತನವನ್ನು ಪರಿಷ್ಕರಿಸಿಲ್ಲ. ವೇತನಗಳನ್ನು ಪರಿಷ್ಕರಿಸಲು ಹಾಗೂ ತುಟ್ಟಿಭತ್ಯೆಯನ್ನು ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡುವುದಾಗಿ ರಾಜನ್ ಹೇಳಿದರು.

(ದಟ್ಸ್‌‍ಕನ್ನಡ ವಾರ್ತೆ)
ಎಡಪಕ್ಷಗಳ ಮುಷ್ಕರಕ್ಕೆ ವ್ಯಾಪಕ ಬೆಂಬಲ
ಆಟೋ ಚಾಲಕರ ಒಂದು ದಿನದ ಮುಷ್ಕರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+