• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮ್ಯಾಡ್ರಿಡ್‌ ವಿಮಾನ ಅಪಘಾತದಲ್ಲಿ 153 ಸಾವು

By Staff
|

ಮ್ಯಾಡ್ರಿಡ್, ಆ. 21 : ಸ್ಪೇನ್ ದೇಶದ ವಿಮಾನವೊಂದು ಟೇಕಾಫ್ ಸಮಯದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದರಿಂದ ತುರ್ತು ಭೂಸ್ಪರ್ಶ ಮಾಡಿ ಅಪಘಾತ ಒಳಗಾಯಿತು. ಅದರಲ್ಲಿ ಪ್ರಯಾಣಿಸುತ್ತಿದ್ದ 153 ಮಂದಿ ಮೃತಪಟ್ಟಿದ್ದು 26 ಮಂದಿ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.

ಸ್ಪೇನ್ ದೇಶದ Flight JK5022 ' MD-82' ಎಂಬ ವಿಮಾನವು 166 ಪ್ರಯಾಣಿಕರನ್ನು ಹೊತ್ತೊಯುತ್ತಿತ್ತು. ಮ್ಯಾಡ್ರಿಡ್ ನ ಭರಜಾಸ್ ವಿಮಾನ ನಿಲ್ದಾಣದ ಹತ್ತಿರದಲ್ಲಿ ಕ್ಯಾನರಿ ನಡುಗಡ್ಡೆಯ ಲಾಸ್ ಪಾಲ್ಮಾಸ್ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ. ವಿಮಾನದ ಇಂಜಿನ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದರಿಂದ ತುರ್ತು ಭೂಸ್ಪರ್ಶ ಮಾಡುವ ಸಂದರ್ಭದಲ್ಲಿ ದುರಂತ ನಡೆದಿದೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 166 ಜನರಲ್ಲಿ 153 ಜನ ಸಾವಿಗೀಡಾಗಿದ್ದಾರೆ ಎಂದು ಮ್ಯಾಡ್ರಿಡ್ ವಿಮಾನಯಾನ ಇಲಾಖೆ ಮೂಲಗಳು ತಿಳಿಸಿವೆ. ಗಾಯಗೊಂಡಿರುವ 26 ಮಂದಿಯನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ವಿಮಾನ ಅಪಘಾತ ತಿಳಿಯುತ್ತಿದ್ದಂತೆಯೇ ಮ್ಯಾಡ್ರಿಡ್ ವಿಮಾನಯಾನ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅಪಘಾತ ಸ್ಥಳ ಪರಿಶೀಲನೆ ಮಾಡತೊಡಗಿದ್ದಾರೆ. ಹೆಲಿಕಾಪ್ಟರ್ ಮೂಲಕ ಹೊತ್ತಿ ಉರಿಯುತ್ತಿರುವ ಬೆಂಕಿಯನ್ನು ನಂದಿಸು ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ. ವಿಮಾನ ಅಪಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಸುಮಾರು 30 ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ ಇಲಾಖೆ ಸ್ಪಷ್ಟಪಡಿಸಿದೆ.

(ಏಜೆನ್ಸೀಸ್)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more