ರಾಜ್ಯ ಸಾರಿಗೆ ಸಂಸ್ಥೆ ಉಪಾಧ್ಯಕ್ಷರಾಗಿ ಜಗ್ಗೇಶ್ ಆಯ್ಕೆ
ಬೆಂಗಳೂರು,ಆ.21: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಚಿತ್ರ ನಟ ಜಗ್ಗೇಶ್ ಅವರನ್ನು ರಾಜ್ಯ ಸಾರಿಗೆ ಸಂಸ್ಥೆಯ ಉಪಾದ್ಯಕ್ಷರನ್ನಾಗಿ ಸರ್ಕಾರ ನೇಮಕ ಮಾಡಿದೆ. ಈ ಸಂಬಂಧ ಎರಡು ಮೂರು ದಿನಗಳಲ್ಲಿ ಅಧಿಕೃತ ಆದೇಶ ಹೊರಬೀಳಲಿದೆ.
ಬುಧವಾರ ತುರುವೇಕೆರೆ ಬಯಲು ರಂಗಭೂಮಿಯಲ್ಲಿ ನಡೆದ ಕುಂದುಕೊರತೆ ಸಭೆಯಲ್ಲಿ ಸಾರಿಗೆ ಸಚಿವ ಆರ್.ಅಶೋಕ್ ಈ ವಿಷಯವನ್ನು ತಿಳಿಸಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದೆ ಬಂಡಾಯ ಏಳಲು ನಿರ್ಧರಿಸಿ ನಂತರ ಟಿಕೆಟ್ ಪಡೆದು ತುರುವೇಕೆರೆ ಕ್ಷೇತ್ರದಿಂದ ಜಗ್ಗೇಶ್ ಗೆದ್ದಿದ್ದರು. ನಂತರ ಜಗ್ಗೇಶ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದು ಇತಿಹಾಸ. ಹೊಸದಾಗಿ ಬಿಜೆಪಿ ಸೇರಿದ ಶಾಸಕರಿಗೆ ಸೂಕ್ತ ಸ್ಥಾನ ಕಲ್ಪಿಸಲು ಬಿಜೆಪಿ ನಿರ್ಧರಿಸಿದ್ದು ಈ ನಿಟ್ಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.
ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಎಂ.ಡಿ.ಲಕ್ಷ್ಮೀನಾರಾಯಣ್ ಅವರನ್ನು ಕೈಮಗ್ಗ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ನೇಮಿಸಲಾಗಿದೆ. ಹಾಗೆಯೇ ಚೆನ್ನಿಗಪ್ಪ ಅವರ ಪುತ್ರ ಗೌರಿಶಂಕರ್ ಅವರನ್ನ್ನು ನಿಗಮ ಮಂಡಳಿಗೆ ನೇಮಕ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು.
(ದಟ್ಸ್ಕನ್ನಡ ವಾರ್ತೆ)


Click it and Unblock the Notifications
