ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ 84 ತಾಲೂಕುಗಳು ಬರಪೀಡಿತ:ಕರುಣಾಕರರೆಡ್ಡಿ

By Staff
|
Google Oneindia Kannada News

ಬೆಂಗಳೂರು,ಆ.22: ಮುಂಗಾರು ಮಳೆ ಕೈಕೊಟ್ಟ ಕಾರಣ ರಾಜ್ಯದ 84 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಕಂದಾಯ ಸಚಿವ ಕರುಣಾಕರರೆಡ್ಡಿ ತಿಳಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಆನೇಕಲ್, ದೊಡ್ಡಬಳ್ಳಾಪುರ, ಚನ್ನಪಟ್ಟಣ, ಕನಕಪುರ, ರಾಮನಗರ ಸೇರಿದಂತೆ 21 ಜಿಲ್ಲೆಗಳ 84 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಬೆಂಗಳೂರು ನಗರ,ಬೆಂಗಳೂರು ಗ್ರಾಮಾಂತರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು, ಬಳ್ಳಾರಿ, ಕೊಪ್ಪಳ, ರಾಯಚೂರು, ಗುಲ್ಬರ್ಗ, ಬೀದರ್, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಹಾವೇರಿ, ಧಾರವಾಡ ಜಿಲ್ಲೆಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ ಎಂದು ಹೇಳಿದರು.

ಪ್ರಕೃತಿ ವಿಕೋಪ ನಿರ್ವಹಣೆಗೆ ರು.115 ಕೋಟಿ ಹಣವಿದ್ದು 50 ಕೋಟಿ ರು.ತುರ್ತು ಹಣ ಬಿಡುಗಡೆ ಮಾಡುವಂತೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಎರಡು ಉಂಟಾಗಿವೆ. ಈ ಬಗ್ಗೆ ತುರ್ತು ಪರಿಹಾರ ನೀಡಲು ಸೆಪ್ಟೆಂಬರ್ ಮೊದಲ ವಾರದಲ್ಲಿ ಕೇಂದ್ರಕ್ಕೆ ನಿಯೋಗ ಕರೆದೊಯ್ಯ್ಯಲಾಗುವುದು.ನಿಯೋಗದಲ್ಲಿ ಪ್ರತಿಪಕ್ಷಗಳು ಇರಬೇಕೆ ಬೇಡವೆ ಎಂಬ ಬಗ್ಗೆ ಮುಖ್ಯಮಂತ್ರಿಗಳು ನಿರ್ಧರಿಸಲಿದ್ದಾರೆ. ಇನ್ನೊಂದು ವಾರದಲ್ಲಿ ಪ್ರವಾಹ ಪೀಡಿತ ಹಾಗೂ ಬರಪೀಡಿತ ಪ್ರದೇಶಗಳ ನಷ್ಟದ ವರದಿ ಲಭ್ಯವಾಗಲಿದೆ ಎಂದು ಸಚಿವರು ವಿವರ ನೀಡಿದರು.

(ದಟ್ಸ್‌‍ಕನ್ನಡ ವಾರ್ತೆ)

ಗ್ರಾಮೀಣ ಭಾಗದಲ್ಲಿ ಬಿಪಿಒ ಸ್ಥಾಪನೆ: ಯಡಿಯೂರಪ್ಪ
ಉಕ ಪ್ರವಾಹಪೀಡಿತ ಪ್ರದೇಶಗಳಿಗೆ ಯಡಿಯೂರಪ್ಪ ಭೇಟಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X