ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಿಷೇಧದ ತೀರ್ಪಿಗೆ ತಡೆ

By Staff
|
Google Oneindia Kannada News

ಬೆಂಗಳೂರು, ಆ. 22 : ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನ ಏಕಸದಸ್ಯ ಪೀಠ ನೀಡಿದ್ದ ತೀರ್ಪನ್ನು ಹೈಕೋರ್ಟ್ ನ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿ ನಾಲ್ಕು ವಾರಗಳ ಕಾಲ ವಿಚಾರಣೆ ಮುಂದೂಡಿದೆ. ಈ ತೀರ್ಪಿನಿಂದ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅನುಮತಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಗಣಿ ದೊರೆಗಳಿಗೆ ಜಯ ದೊರೆಕಿದಂತಾಗಿದೆ.

ಅರಣ್ಯ ಪ್ರದೇಶ ನೈಸರ್ಗಿಕ ಸಂಪತ್ತು. ಅಲ್ಲಿ ಯಾವ ಕಾರಣಕ್ಕೂ ಗಣಿಗಾರಿಕೆಗೆ ಅವಕಾಶ ಮಾಡಿಕೊಡಬಾರದು. ಗಣಿಗಾರಿಕೆಯನ್ನು ಸಂಪೂರ್ಣವಾಗಿ ಕಿತ್ತು ಹಾಕಬೇಕು ಎಂದು ರಾಜ್ಯ ಸರ್ಕಾರಕ್ಕೆ ನ್ಯಾಯಾಮೂರ್ತಿ ದಿನಕರನ್ ಅವರಿದ್ದ ಏಕಸದಸ್ಯ ಪೀಠ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಶ್ರೀನಿವಾಸ ಎಂಬುವವರು ಮರುವಿಚಾರಣೆಗಾಗಿ ಹೈಕೋರ್ಟ್ ನ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ವಿಭಾಗೀಯ ನ್ಯಾಯಾಪೀಠ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ತಡೆ ಹಿಡೆದಿದೆ. ನಾಲ್ಕು ವಾರಗಳ ಕಾಲ ವಿಚಾರಣೆಯನ್ನು ಮುಂದೂಡಿದೆ. ವಿಭಾಗೀಯ ಪೀಠ ನಡೆಸಿದ ವಿಚಾರಣೆ ಸಂದರ್ಭದಲ್ಲಿ ಸರ್ಕಾರ ಪರ ವಕೀಲರು ಗೈರು ಹಾಜರಾಗಿದ್ದರು. ಜತೆಗೆ ಪ್ರಕರಣಕ್ಕೆ ಸಂಬಂಧಿಸಿ ಅಗತ್ಯ ದಾಖಲೆ ಪತ್ರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಲ್ಲಿ ಸರ್ಕಾರ ವಿಫಲವಾದ ಕಾರಣ ವಿಭಾಗೀಯ ಈ ನಿರ್ಧಾರಕ್ಕೆ ಬಂದಿದೆ.

ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶ ನೀಡಿದ್ದ ಅರಣ್ಯ ಸಂಪತ್ತನ್ನು ಉಳಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ರಾಜ್ಯ ಸರ್ಕಾರಕ್ಕೆ ಹೇಳಿದ್ದರಿಂದ ಮುಖ್ಯಮಂತ್ರಿ ಯಡಿಯೂರಪ್ಪ ನ್ಯಾಯಾಲಯದ ಆದೇಶಕ್ಕೆ ತಲೆ ಬಾಗುತ್ತೇವೆ. ಗಣಿಗಾರಿಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ ಮಹತ್ವದ ವಿಚಾರಣೆ ಬಂದಾಗ ಸರ್ಕಾರದ ವಕೀಲರು ಗೈರು ಹಾಜರಾಗಿರುವುದು ಆಕ್ರೋಶ ಕಾರಣವಾಗಿದೆ. ಸರ್ಕಾರದ ನಿರ್ಲಕ್ಷ ಧೋರಣೆಗೆ ವ್ಯಾಪಕ ಟೀಕೆಗಳು ಕೇಳ ಬರತೊಡಗಿವೆ. 136 ಕಂನಿಗಳು ಗಣಿಗಾರಿಕೆ ಕೋರಿ ಅರ್ಜಿ ಕೇಂದ್ರ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದವು. ಗಣಿಗಾರಿಕೆಗೆ ಅವಕಾಶ ನೀಡಬಾರದು ಎಂದು ಯಡಿಯೂರಪ್ಪ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು.

(ದಟ್ಸ್ ಕನ್ನಡ ವಾರ್ತೆ)

ಗಣಿಗಾರಿಕೆ ತಡೆಯಲು ಕೇಂದ್ರಕ್ಕೆ ಪತ್ರ : ಯಡಿಯೂರಪ್ಪ
ಗಣಿ ವಿಚಾರಕ್ಕೆ ಹೈಕೋರ್ಟ್ ಸಲಹೆ ಸೂಕ್ತ: ಯಡಿಯೂರಪ್ಪ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X