ಕನ್ನಡಕ್ಕಾಗಿ ಪ್ರಾಣ ತ್ಯಾಗಕ್ಕೂ ಸಿದ್ಧ: ನಲ್ಲೂರು ಪ್ರಸಾದ್
ಬೆಂಗಳೂರು,ಆ.27: ಕನ್ನ್ನಡ ನಾಡಿನ ಏಳಿಗೆಗಾಗಿ ತಮ್ಮ ಇಡೀ ಜೀವನ ಮೀಸಲಿಡುವುದಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ಡಾ.ಆರ್.ಕೆ.ನಲ್ಲೂರು ಪ್ರಸಾದ್ ಹೇಳಿದರು.
ಕಸಾಪದ 23ನೇ ಅಧ್ಯಕ್ಷರಾಗಿ ಬುಧವಾರ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡುತ್ತಿದ್ದ ಅವರು, ಕನ್ನಡಕ್ಕಾಗಿ ಪ್ರಾಣತ್ಯಾಗಕ್ಕೂ ಸಿದ್ಧವಿರುವುದಾಗಿ ಹೇಳಿದರು. ಗಾಂಧಿಜಿಯವರ ತತ್ವ ಹಾಗೂ ಆದರ್ಶಗಳ ಮಾರ್ಗದರ್ಶನದಲ್ಲೇ ಕನ್ನಡ ಸಾಹಿತ್ಯ ಪರಿಷತನ್ನು ಮುನ್ನಡೆಸುತ್ತೇನೆ. ಯಾವುದೇ ಒತ್ತಡಕ್ಕೂ ಜಗ್ಗ್ಗದೆ ಕಸಾಪಗೆ ಹೊಸ ರೂಪ ನೀಡುವುದಾಗಿ ಅವರು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಯಾವುದೇ ಜನಾಂಗ,ಸಮುದಾಯಕ್ಕೆ ಸೀಮಿತವಾಗಿಲ್ಲ. ಕನ್ನಡದ ನೆಲ,ಜಲ,ನುಡಿಯ ರಕ್ಷಣೆಗೆ ಎಲ್ಲರೂ ಬೀದಿಗೆ ಇಳಿದು ಹೋರಾಟ ಮಾಡಬೇಕು ಹಾಗೂ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡುವ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ ಎಂದರು.
(ದಟ್ಸ್‌ಕನ್ನಡ ವಾರ್ತೆ)
ಕನ್ನಡಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಲ್ಲೂರ್ ಪ್ರಸಾದ್












Click it and Unblock the Notifications