ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಸಾಯಿಖಾನೆಗೆ ಒಯ್ಯುತ್ತಿದ್ದ ಗೋರಕ್ಷಣೆ; 4 ಜನ ಬಂಧನ

By Staff
|
Google Oneindia Kannada News

ಕುಣಿಗಲ್, ಆ. 28 : ಅಕ್ರಮವಾಗಿ ಕಸಾಯಿಖಾನೆಗೆ ಸಾಗಾಣಿಕೆ ಮಾಡುತ್ತಿದ್ದ 70ಕ್ಕೂ ಅಧಿಕ ಗೋವುಗಳನ್ನು ಸಾರ್ವಜನಿಕರು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಕುಣಿಗಲ್ ಪೊಲೀಸರು ಬಂಧಿಸಿರುವ ಘಟನೆ ಗುರುವಾರ ನಡೆದಿದೆ.

ಒಂದು ಲಾರಿ, ಒಂದು ಟೆಂಪೋದಲ್ಲಿ ತುಂಬಿದ್ದ ಸುಮಾರು 70 ಗೋವುಗಳನ್ನು ಕಸಾಯಿಖಾನೆಗೆ ತೆಗೆದುಕೊಂಡು ಹೋಗುತ್ತಿದ್ದಾರೆ ಎನ್ನುವ ಸಂಶಯದೊಂದಿಗೆ ಕುಣಿಗಲ್ ಸಾರ್ವಜನಿಕರು ವಾಹನಗಳನ್ನು ತಡೆದು, ನಾಲ್ಕು ಜನರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಲಾರಿ ಹಾಸನ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು.

ಕುಣಿಗಲ್ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ. ಬಂಧನಕ್ಕೊಳಗಾಗಿರುವ ನಾಲ್ವರು ವಿಚಾರಣೆಯನ್ನು ಪೊಲೀಸರು ಆರಂಭಿಸಿದ್ದು, ಸಂಪೂರ್ಣ ಮಾಹಿತಿಯೂ ವಿಚಾರಣೆಯ ನಂತರ ದೊರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಅನೇಕ ಕಡೆಗಳಲ್ಲಿ ಗೋವುಗಳನ್ನು ಕಸಾಯಿಖಾನೆಗಳಿಗೆ ಸಾಗಾಣಿಕೆ ಮಾಡುವ ಕೃತ್ಯ ನಿರಂತವಾಗಿ ಸಾಗಿದೆ. ಇತ್ತೀಚೆಗೆ ಮೈಸೂರು ಹೊರವಲಯದಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ತಂಡವನ್ನು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿತ್ತು.

(ದಟ್ಸ್ ಕನ್ನಡ ವಾರ್ತೆ)

ಕಸಾಯಿಖಾನೆಗೆ ಒಯ್ಯುತ್ತಿದ್ದ ಗೋರಕ್ಷಣೆ; 15 ಜನ ಬಂಧನ
ಇಗ್ಗಲೂರು ಕಸಾಯಿಖಾನೆಗೆ ವಿರೋಧ; ಶಾಸಕ ಬಂಧನ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X