ಜ್ಞಾನ ಆಯೋಗ ಅಧ್ಯಕ್ಷರಾಗಿ ಕಸ್ತೂರಿ ರಂಗನ್
ಬೆಂಗಳೂರು, ಸೆ.1: ರಾಜ್ಯ ಸಭೆ ಸದಸ್ಯ ಹಾಗೂ ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಡಾ. ಕಸ್ತೂರಿ ರಂಗನ್ ಅವರನ್ನು ಹೊಸದಾಗಿ ಸ್ಥಾಪಿಸಲಾಗಿರುವ ರಾಜ್ಯ ಜ್ಞಾನ ಆಯೋಗದ ಅಧ್ಯಕ್ಷರನ್ನಾಗಿ ಕರ್ನಾಟಕ ಸರ್ಕಾರ ನೇಮಕ ಮಾಡಿದೆ.
ಬೆಂಗಳೂರು ವಿಶ್ವವಿದ್ಯಾಲಯದ ಡಾ. ಎಂ.ಕೆ.ಶ್ರೀಧರ್, ಗುಲ್ಬರ್ಗ ವಿಶ್ವವಿದ್ಯಾಲಯದ ಮಾಜಿ ಉಪ ಕುಲಪತಿ ಡಾ. ಕುಟಿನೊ ಹಾಗೂ ಬೆಂಗಳೂರು ಮ್ಯಾನೇಜ್‌ಮೆಂಟ್ ಸಂಸ್ಥೆಯ ಡಾ. ನಯನತಾರಾ ಅವರನ್ನು ಜ್ಞಾನ ಆಯೋಗದ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಸರ್ಕಾರ ಸೋಮವಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು, ಮೈಸೂರು, ಕರ್ನಾಟಕ, ಗುಲ್ಬರ್ಗಾ, ಬಿಜಾಪುರದ ಮಹಿಳಾ ವಿಶ್ವವಿದ್ಯಾಲಯ ಹಾಗೂ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಉಪ ಕುಲಪತಿಗಳು ರಾಜ್ಯ ಜ್ಞಾನ ಆಯೋಗದ ಮಾಜಿ ಸದಸ್ಯರಾಗಿದ್ದರು. ಹಾಗೆಯೇ ಕರ್ನಾಟಕ ಉರ್ದು ಅಕಾಡೆಮಿ ಅಧ್ಯಕ್ಷರನ್ನಾಗಿ ಕಲೀಲ್ ಉರ್ ರೆಹಮಾನ್ ಅವರನ್ನು ಆಯ್ಕೆ ಮಾಡಲಾಗಿದ್ದು ಉಳಿದ ಸದಸ್ಯರ ಹೆಸರುಗಳನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ತಿಳಿಸಲಾಗಿದೆ.
(ದಟ್ಸ್‌ಕನ್ನಡ ವಾರ್ತೆ)












Click it and Unblock the Notifications