ಶೀಘ್ರದಲ್ಲಿ ಉಚಿತ ವಿದ್ಯುತ್ ಜಾರಿ ಯಡಿಯೂರಪ್ಪ
ದಾವಣಗೆರೆ, ಸೆ. 5 : ರೈತರ ಕೃಷಿ ಪಂಪಸೆಟ್ ಗಳಿಗೆ ಉಚಿತ ವಿದ್ಯುತ್ ನೀಡುವ ಯೋಜನೆ ಶೀಘ್ರದಲ್ಲಿ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇಂದಿಲ್ಲಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಿನ ರೈತರಿಗೆ ನೀಡಿರುವ ಭರವಸೆಯನ್ನು ಉಳಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದರು. ರಾಜ್ಯ ಸರ್ಕಾರ ಈ ವರ್ಷ 10 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿಹೊಂದಿದೆ. ಇದಕ್ಕಾಗಿ ಸೆ. 8 ರಂದು ಮುಖ್ಯಮಂತ್ರಿಯವರು ನಿಯೋಗ ಛತ್ತೀಸ್ ಗಡಕ್ಕೆ ತೆರಳುವುದಾಗಿ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವುದಾಗಿ ಕೊಟ್ಟ ಭರವಸೆಯನ್ನು ಈಡೇರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆಗಸ್ಟ್ 1 ರಿಂದ ಕೃಷಿ ಪಂಪ್ ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಬಜೆಟ್ ಪೂರ್ವದಲ್ಲಿ ಯಡಿಯೂರಪ್ಪ ಹೇಳಿದ್ದರು. ಆದರೆ ಆಗಸ್ಟ್ ತಿಂಗಳು ಮುಗಿದರೂ ಆ ಬಗ್ಗೆ ಸರ್ಕಾರ ಚಕಾರ ಎತ್ತಿರಲಿಲ್ಲ. ಇದರಿಂದ ಪ್ರತಿಪಕ್ಷಗಳು ಹಾಗೂ ಸಾರ್ವಜನಿಕ ವಲಯದಿಂದ ತೀವ್ರ ಟೀಕೆ ಕೇಳಿ ಬಂದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಈ ಹೇಳಿಕೆ ನೀಡಿದ್ದಾರೆ.
ಉಚಿತ ವಿದ್ಯುತ್ ಯೋಜನೆ ಜಾರಿಯಾದರೆ ರಾಜ್ಯದ ಸುಮಾರು 17 ಲಕ್ಷ ಕೃಷಿ ಪಂಪ್‌ಸೆಟ್‌ಗಳು ಉಚಿತ ವಿದ್ಯುತ್‌ನ ಪ್ರಯೋಜನ ಪಡೆಯಲಿವೆ. ಇದಕ್ಕಾಗಿ ರಾಜ್ಯ ಸರ್ಕಾರ 840 ಕೋಟಿ ರು.ಗಳಷ್ಟು ಹೆಚ್ಚಿನ ಹೊರಯನ್ನು ಭರಿಸಲಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜುಲೈ 17ರಂದು ಮಂಡಿಸಿದ ಬಜೆಟ್‌ನಲ್ಲಿ ಇದಕ್ಕಾಗಿ ಹಣ ಮೀಸಲಿರಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಗದಗ ವಿಮಾನ ನಿಲ್ದಾಣ, ಸುಸಜ್ಜಿತ ಆಸ್ಪತ್ರೆಗೆ ಕ್ರಮ
ಯಡಿಯೂರಪ್ಪ ಚೊಚ್ಚಲ ಬಜೆಟ್‌ನ ಪಕ್ಷಿನೋಟ












Click it and Unblock the Notifications