ಪ್ರತಿಭಟನೆಗೆ ವಿದ್ಯಾರ್ಥಿಗಳು ಸಲ್ಲ : ಕಾಗೇರಿ

ಬೆಂಗಳೂರು, ಸೆ. 5 : ಪ್ರತಿಭಟನಾ ಮಾಧ್ಯಮವಾಗಿ ಶಾಲಾ ವಿದ್ಯಾರ್ಥಿಗಳನ್ನು ಬಳಸಿಕೊಂಡರೆ ಅಂತಹ ಶಾಲೆಯ ಆಡಳಿತ ಮಂಡಳಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸರ್ಕಾರದ ನಿಯಮಗಳು ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೂ ಅನ್ವಯಿಸಲಿವೆ ಎಂದರು. ಸರ್ಕಾರ ಮತ್ತು ಶಿಕ್ಷಕರ ಸಹಭಾಗಿತ್ವದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರಿಗೆ ಆರೋಗ್ಯ ವಿಮೆ ಯೋಜನೆ ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಕಾಗೇರಿ ತಿಳಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಒರಿಸ್ಸಾ ಹಿಂಸಾಚಾರದಲ್ಲಿ ಚರ್ಚೆಗಳ ಮೇಲೆ ಹಿಂದುಪರ ಸಂಘಟನೆಗಳು ನಡೆಸುತ್ತಿರುವ ದಾಳಿಯನ್ನು ಖಂಡಿಸಿ ದೇಶಾದ್ಯಂತ ಕ್ರಿಶ್ಚಿಯನ್ ಸಂಘ ಸಂಸ್ಥೆಗಳು ತಮ್ಮ ಶಾಲೆ ಮತ್ತು ಕಚೇರಿಗಳನ್ನು ಮುಚ್ಚಿ ಒಂದು ದಿನದ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ರಾಜ್ಯದಲ್ಲಿರುವ ಕ್ರಿಶ್ಚಿಯನ್ ಶಾಲೆಗಳನ್ನು ಮುಚ್ಚಿ ಬಂದ್ ಆಚರಿಸಿದ್ದರು.

ಕ್ರಿಶ್ಚಿಯನ್ನರ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಶಿಕ್ಷಣ ಸಚಿವರು, ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಾಲೆಗಳ ಶಿಕ್ಷಕರ ಒಂದು ದಿನದ ಸಂಬಳವನ್ನು ಕಟ್ ಮಾಡಲು ಆದೇಶ ನೀಡಿದ್ದರು. ಸಚಿವರ ಈ ಕ್ರಮದಿಂದ ಪರ ವಿರೋಧ ವ್ಯಕ್ತವಾಗಿತ್ತು. ಸಂಸದ ಎಚ್.ಟಿ.ಸಾಂಗ್ಲಿಯಾನ ಅವರು ಸರ್ಕಾರ ಧೋರಣೆಯನ್ನು ಬಲವಾಗಿ ಖಂಡಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

ರಜೆ ಘೋಷಿಸಿದ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ
ಒರಿಸ್ಸಾ ಹತ್ಯಾಕಾಂಡ ಖಂಡಿಸಿ ಎಲ್ಲೆಡೆ ಪ್ರತಿಭಟನೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+