ಇಸ್ಕಾನ್?ನಿಂದ ರೋಗಿಗಳಿಗೆ ಪುಷ್ಟಿಕರ ಆಹಾರ
ಬೆಂಗಳೂರು, ಸೆ.9 : ಕಳೆದ ಅನೇಕ ವರ್ಷಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಖೈದಿಗಳಿಗೆ ಉಚಿತ ಆಹಾರ ನೀಡಿ ಸಮಾಜ ಸೇವೆಯಲ್ಲಿ ತೊಡಗಿರುವ ಸರ್ಕಾರೇತರ ಸಂಸ್ಥೆ ಅಕ್ಷಯ ಪಾತ್ರ ಫೌಂಡೇಷನ್, ಇದೀಗ ಆಸ್ಪತ್ರೆಯಲ್ಲಿರುವ ರೋಗಿಗಳಿಗೂ ಕನಿಷ್ಠ ಬೆಲೆಗೆ ಪುಷ್ಠಿಕರವಾದ ಆಹಾರ ನೀಡುವ ಯೋಜನೆಯನ್ನು ಜಾರಿಗೆ ತಂದಿದೆ.
ದೇಶದಲ್ಲಿಯೇ ಪ್ರಥಮ ಬಾರಿಗೆ ಎನ್ನಲಾದ ಈ ಯೋಜನೆಯನ್ನು ರೂಪಿಸಿರುವ ಪೌಂಡೇಷನ್ ಆಡಳಿತ ಮಂಡಳಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಆಸ್ಪತ್ರೆಗಳಿಗೆ ಆಹಾರ ಒದಗಿಸುವ ಯೋಜನೆಯನ್ನು ನಗರದ ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಚಾಲನೆ ನೀಡಲಾಯಿತು. ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಕೇಂದ್ರದಲ್ಲಿ 180 ಹಾಸಿಗೆಗಳ ಆಸ್ಪತ್ರೆ ಇದಾಗಿದ್ದು, ಪ್ರತಿ ದಿನ 200 ಕ್ಕೂ ಅಧಿಕ ಹೊರ ರೋಗಿಗಳು ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಆಸ್ಪತ್ರೆಗೆ ಬರುವ ಎಲ್ಲ ರೋಗಿಗಳು ಇದರ ಸೌಲಭ್ಯವನ್ನು ಪಡೆಯಲಿದ್ದಾರೆ.
ಇಂದಿರಾಗಾಂಧಿ ಮಕ್ಕಳ ಆರೋಗ್ಯ ಕೇಂದ್ರದ ಮುಖ್ಯಸ್ಥರೂ ಆಗಿರುವ ವೈದ್ಯಕೀಯ ಸಚಿವ ರಾಮಚಂದ್ರಗೌಡ ಮಾತನಾಡಿ, ಸರ್ಕಾರದ ಎದುರಿಗೆ ಎನ್ ಜಿಓ ತನ್ನ ಬೇಡಿಕೆಯನ್ನು ಇಟ್ಟಿತ್ತು. ಅಲ್ಲದೇ ಆಸ್ಪತ್ರೆಯಲ್ಲಿ ಸಂಪರ್ಕವಾಗಿ ಆಹಾರ ಒದಗಿಸುವಲ್ಲಿ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಆ ಸಂಸ್ಥೆಗೆ ಆಹಾರ ಒದಗಿಸುವ ಹೊಣೆಯನ್ನು ನೀಡಲಾಗಿದೆ. ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಆಹಾರ ಆಸ್ಪತ್ರೆಗೆ ಬರುವ ಎಲ್ಲ ರೋಗಿಗಳಿಗೆ ದೊರೆಯಲಿದೆ ಎಂದರು.
ಅಕ್ಷಯ ಪಾತ್ರ ಪೌಂಡೇಷನ್ ಸಂಸ್ಥೆಯು 14 ರಾಜ್ಯಗಳಲ್ಲಿ ತನ್ನ ಕಾರ್ಯವ್ಯಾಪ್ತಿಯನ್ನು ಹೊಂದಿದೆ. 9 ಲಕ್ಷಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳು ಗುಣಮಟ್ಟದ ಆಹಾರ ಸೌಲಭ್ಯವನ್ನು ಪಡೆಯುತ್ತಿದ್ದಾರೆ. 4500 ಶಾಲೆಗಳು ಇದರ ಪ್ರಯೋಜನ ಪಡೆದುಕೊಳ್ಳುತ್ತಿವೆ. 2000 ಸಾಲಿನಲ್ಲಿ ಬೆಂಗಳೂರಿನಲ್ಲಿ ಫೌಂಡೇಷನ್ ನ ಸೇವೆ ಆರಂಭವಾಗಿದ್ದು, ಸುಮಾರು 1500 ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಭುವನೇಶ್ವರದಲ್ಲಿ ಅಕ್ಷಯ ಪಾತ್ರೆಯ ಯಶೋಗಾಥೆ
ಮಣಿಪಾಲ್ ಫೌಂಡೇಶನ್ ನಿಂದ ಅಕ್ಷಯ ಪಾತ್ರೆಗೆ ಧನ


Click it and Unblock the Notifications
