ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತಿವೃಷ್ಟಿ ಪರಿಹಾರಕ್ಕೆ ದೆಹಲಿಗೆ ಸಚಿವರ ನಿಯೋಗ

By Staff
|
Google Oneindia Kannada News

ಬೆಂಗಳೂರು, ಸೆ. 11 : ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದ ಉಂಟಾಗಿರುವ ಅತಿವೃಷ್ಟಿಯ ಹಿನ್ನೆಲೆಯಲ್ಲಿ ಸಹಾಯಧನ ಕೋರಲು ರಾಜ್ಯದ ಸರ್ಕಾರದ ಸಚಿವರ ನೇತೃತ್ವದ ನಿಯೋಗ ಇಂದು ದೆಹಲಿಗೆ ತೆರಳಿದೆ.

ಎರಡು ದಿನಗಳ ಪ್ರವಾಸದ ನಿಯೋಗದಲ್ಲಿ ಕಂದಾಯ ಸಚಿವ ಕೆ.ಕರುಣಾಕರರೆಡ್ಡಿ ನೇತೃತ್ವದಲ್ಲಿ ಸಚಿವರಾದ ರೇವೂ ನಾಯಕ್ ಬೆಳಮಗಿ, ರವೀಂದ್ರನಾಥ, ಗೋವಿಂದ ಕಾರಜೋಳ, ದಿಲ್ಲಿ ಪ್ರತಿನಿಧಿ ಸುಭಾಷ್ ಭರಣಿ, ಮಾಜಿ ಸಚಿವ ಡಿ.ಎಚ್.ಶಂಕರಮೂರ್ತಿ ಅವರು ಇಂದು ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಇಂದು ಮಧ್ಯಾಹ್ನ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ವಿದೇಶ ಪ್ರವಾಸದಲ್ಲಿರುವ ಕೃಷಿ ಸಚಿವ ಶರದ್ ಪವಾರ್ ನಾಳೆ ದೆಹಲಿಗೆ ಆಗಮಿಸಲಿದ್ದು, ಅವರನ್ನು ಭೇಟಿ ಮಾಡಿ ಸಹಾಯಧನ ನೀಡುವಂತೆ ಮನವಿ ಮಾಡಿಕೊಳ್ಳುವ ಸಾಧ್ಯತೆ ಇದೆ.

ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಇದು ಮೂರನೇ ಬಾರಿಗೆ ರಾಜ್ಯದ ನಿಯೋಗ ದೆಹಲಿಗೆ ತೆರಳಿದೆ. ಈ ಮೊದಲು ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ ತೀವ್ರಗೊಂಡಾಗ ಮುಖ್ಯಮಂತ್ರಿ ಯಡಿಯೂರಪ್ಪ ರಸಗೊಬ್ಬರ ಖಾತೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ಭೇಟಿ ರಾಜ್ಯಕ್ಕೆ ಬೇಕಿರುವ ಅಗತ್ಯ ರಸಗೊಬ್ಬರ ಬಿಡುಗಡೆ ಒತ್ತಾಯಿಸಿದ್ದರು. ನಂತರ ಕನ್ನಡಕ್ಕೆ ಭಾಷೆ ಶಾಸ್ತ್ರೀಯ ಸ್ಥಾನಮಾನ ಕುರಿತು ಸರ್ವಪಕ್ಷಗಳ ಸದಸ್ಯರು ಹಾಗೂ ಹಿರಿಯ ಸಾಹಿತಿಗಳ ನಿಯೋಗ ದೆಹಲಿಗೆ ತೆರಳಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಶಾಸ್ತ್ರೀಯ ಭಾಷೆ ನೀಡಬೇಕೆಂದು ಒತ್ತಾಯಿಸಿತ್ತು. ಕಂದಾಯ ಸಚಿವ ಕರುಣಾಕರರೆಡ್ಡಿ ನೇತೃತ್ರದ ಮೂರನೇ ನಿಯೋಗ ಇದಾಗಿದೆ.

ಕಳೆದ ಕೆಲ ದಿನಗಳಿಂದ ಸುರಿದ ಮಳೆಯಿಂದ ರಾಜ್ಯದಲ್ಲಿ ಪ್ರವಾಹ ಉಂಟಾಗಿದೆ. ಲಕ್ಷಾಂತರ ರುಪಾಯಿ ಬೆಳೆ ನಾಶವಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಪ್ರವಾಹ ಪೀಡಿತ ಜಿಲ್ಲೆಗಳಿಗೆ ಪರಿಹಾರ ನೀಡಬೇಕಿರುವ ಹಿನ್ನೆಲೆಯಲ್ಲಿ ಪ್ರವಾಹ ವಿಕೋಪ ನಿಧಿಯನ್ನು ರಾಜ್ಯಕ್ಕೆ ಬಿಡುಗಡೆ ಮಾಡಬೇಕು ಎಂದು ಕರುಣಾಕರರೆಡ್ಡಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಬಿಹಾರ ಪ್ರವಾಹಕ್ಕೆ 1000 ಕೋಟಿ ರುಪಾಯ ಸಹಾಯಧನ ನೀಡಿತ್ತು.

(ದಟ್ಸ್ ಕನ್ನಡ ವಾರ್ತೆ)
ಮಳೆಯ ಅಬ್ಬರಕ್ಕೆ ದಕ್ಷಿಣ ಒಳನಾಡಿನಲ್ಲಿ 5 ಸಾವು
ರಾಜ್ಯದ 84 ತಾಲೂಕುಗಳು ಬರಪೀಡಿತ:ಕರುಣಾಕರರೆಡ್ಡಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X