ಯುವ ಬರಹಗಾರರ ಕೃತಿಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಸೆ.13:ಕನ್ನಡ ಪುಸ್ತಕ ಪ್ರಾಧಿಕಾರವು 2008ನೇ ಸಾಲಿಗೆ ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ದಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕನ್ನಡ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಯುವ ಬರಹಗಾರರು ರಚಿಸಿದ ಚೊಚ್ಚಲ ಕೃತಿ ಪ್ರಕಟಿಸಲು ಧನ ಸಹಾಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
35 ವರ್ಷದೊಳಗಿನ ಲೇಖಕ-ಲೇಖಕಿಯರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ವಯಸ್ಸಿನ ದೃಢೀಕರಣಕ್ಕಾಗಿ ಜನನ ಪ್ರಮಾಣ ಪತ್ರ ಅಥವಾ ಶಾಲಾ ದಾಖಲಾತಿಯನ್ನು ಹಾಗೂ ಇದುವರೆಗೂ ಎಲ್ಲಿಯೂ ಚೊಚ್ಚಲ ಕೃತಿ ಪ್ರಕಟವಾಗದೇ ಇರುವ ಬಗ್ಗೆ ಸ್ವಯಂ ದೃಢೀಕರಣ ಪತ್ರದೊಂದಿಗೆ ಕೃತಿ ಹಸ್ತಪ್ರತಿಯ ಜೆರಾಕ್ಸ್ ಅನ್ನು ಅಕ್ಟೋಬರ್ 10 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೆ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು -560002 ಈ ವಿಳಾಸಕ್ಕೆ ಕಳುಹಿಸಿಕೊಡಲು ಕೋರಲಾಗಿದೆ.
ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ (080) 2248 4516ಅನ್ನು ಸಂಪರ್ಕಿಸಲು ಸೂಚಿಸಲಾಗಿದೆ.
(ದಟ್ಸ್‌ಕನ್ನಡ ವಾರ್ತೆ)












Click it and Unblock the Notifications