ಇಂಜಿನಿಯರ್ಸ್ ಡೇ: ಸರ್ ಎಂವಿ ವಿಚಾರ ಸಂಕಿರಣ

Sir M Vishveswarayyaಬೆಂಗಳೂರು, ಸೆ.14: ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 15 ರಂದು ಸಂಜೆ 6:00 ಗಂಟೆಗೆ ನಗರದ ವಿಜಯ ನಗರ ಎರಡನೇ ಹಂತದ ಅತ್ತಿಗುಪ್ಪೆ ಎರಡನೇ ಮುಖ್ಯ ರಸ್ತೆಯಲ್ಲಿರುವ ಪಟೇಲ್ ಅಪ್ಪಯ್ಯಣ್ಣ ಕಲ್ಯಾಣ ಮಂಟಪದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಕುರಿತ ವಿಚಾರ ಸಂಕಿರಣ ಹಾಗೂ ಛಾಯಾಚಿತ್ರ ಪ್ರದರ್ಶನ ವ್ಯವಸ್ಥೆಗೊಳಿಸಲಾಗಿದೆ.

ಪತಂಜಲಿ ಯೋಗಾಶ್ರಮ ಟ್ರಸ್ಟ್ ಸಹಯೋಗದಲ್ಲಿ ರಾಜ್ಯ ವಾರ್ತಾ ಇಲಾಖೆ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಹೆಸರಾಂತ ಸಾಹಿತಿ ಪ್ರೊ ಹೀ. ಚಿ. ಶಾಂತವೀರಯ್ಯ ಅವರು "ಸರ್ ಎಂ ವಿಶ್ವೇಶ್ವರಯ್ಯ ಅವರ ಕೊಡುಗೆ : ಒಂದು ಸ್ಮರಣೆ" ಕುರಿತು ಪ್ರಧಾನ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಖ್ಯಾತ ಅಂಚೆ ಚೀಟಿ ಸಂಗ್ರಹಕಾರ ಎಂ. ಆರ್. ಪ್ರಭಾಕರ್ ಅವರ ಛಾಯಾಚಿತ್ರ ಭಂಡಾರದಲ್ಲಿರುವ ಸರ್. ಎಂ. ವಿಶ್ವೇಶ್ವರಯ್ಯ ಅವರ ಅತ್ಯಮೂಲ್ಯ ಛಾಯಾಚಿತ್ರಗಳ ಪ್ರದರ್ಶನವನ್ನು ಪತಂಜಲಿ ಯೋಗಾಶ್ರಮ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಯೋಗಿ ಅವರು ಉದ್ಘಾಟಿಸಲಿದ್ದಾರೆ.

ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ವಾರ್ತಾ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕ ಡಿ. ಪಿ. ಮುರಳೀಧರ್ ಅವರು ಸಾರ್ವಜನಿಕರಲ್ಲಿ, ವಿಶೇಷವಾಗಿ ಯುವ ಜನತೆಯಲ್ಲಿ, ಮನವಿ ಮಾಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+