ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಲವಂತ ಮತಾಂತರ ವಿರುದ್ಧ ಈಶ್ವರಪ್ಪ ಎಚ್ಚರಿಕೆ

By Staff
|
Google Oneindia Kannada News

ಬೆಂಗಳೂರು, ಸೆ.15: ಕರ್ನಾಟಕ ರಾಜ್ಯದಲ್ಲಿ ಬಲವಂತ ಹಾಗೂ ಕಾನೂನುಬಾಹಿರ ಮತಾಂತರವನ್ನು ಪ್ರೋತ್ಸಾಹಿಸುವುದಿಲ್ಲ. ಈ ರೀತಿಯ ಚಟುವಟಿಕೆಯಲ್ಲಿ ಭಾಗಿಯಾಗಿರುವವರವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇಂಧನ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಇದೇ ಪ್ರಥಮ ಬಾರಿಗೆ ದಕ್ಷಿಣದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರಕ್ಕೆ ಮಸಿ ಬಳಿಯಲು ಕೆಲವು ಸಮಾಜ ಘಾತುಕ ಶಕ್ತಿಗಳು ಚರ್ಚ್ ಗಳ ಮೇಲೆ ದಾಳಿ ಮಾಡಿವೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿನ ಚರ್ಚ್ ಗಳ ಮೇಲಿನ ದಾಳಿಯ ತನಿಖೆಗೆ ಆದೇಶಿಸಲಾಗಿದೆ. ಭಜರಂಗ ದಳ ಅಥವಾ ಇನ್ಯಾರೇ ಆಗಲಿ ಚರ್ಚ್ ಗಳ ಮೇಲೆ ದಾಳಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.

ಭಾನುವಾರ ದಕ್ಷಿಣ ಕನ್ನಡ ಮತ್ತಿತರ ಜಿಲ್ಲೆಗಳಲ್ಲಿ ಚರ್ಚ್ ಗಳ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಭಜರಂಗ ದಳದ ಕಾರ್ಯಕರ್ತರು ಸೇರಿದಂತೆ ಕೆಲವನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸಚಿವರು ತಿಳಿಸಿದರು. ಗಲಭೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಹಾಗೆಯೇ ಬಲವಂತವಾಗಿ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರ ಮಾಡುವವರ ವಿರುದ್ಧಸಹ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಈಶ್ವರಪ್ಪ ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

ಮಂಗಳೂರು :ಭಜರಂಗದಳ ಕಾರ್ಯಕರ್ತರ ಬಂಧನ
ಮತಾಂತರ ಪ್ರಕರಣ: ಉಡುಪಿ ಪೊಲೀಸ್ ವರದಿ
ಚರ್ಚ್ ಮೇಲೆ ದಾಳಿ: ಮಂಗಳೂರಿಗೆ ಸಿಎಂ ಭೇಟಿ
ಮತಾಂತರ : ಮಂಗಳೂರು ಉದ್ವಿಗ್ನ, ನಿಷೇಧಾಜ್ಞೆ ಜಾರಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X