ಆನೇಕಲ್ ಕರವೇ ಅಧ್ಯಕ್ಷರ ಕೊಲೆ

ಆನೇಕಲ್, ಸೆ. 18 : ಕರ್ನಾಟಕ ರಕ್ಷಣಾ ವೇದಿಕೆಯ (ನಾರಾಯಗೌಡ ಬಣ) ಟೌನ್ ಅಧ್ಯಕ್ಷ ರಮೇಶ್(27)ನನ್ನು ನಾಲ್ವರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬುಧವಾರ ರಾತ್ರಿ ಕೊಲೆ ಮಾಡಿದ್ದಾರೆ.

ಇಲ್ಲಿನ ದೇವರ ಕೊಂಡಪ್ಪ ವೃತ್ತದಲ್ಲಿ ನಿಂತಿದ್ದ ರಮೇಶ್ ಮೇಲೆ ಇದ್ದಕ್ಕಿದ್ದಂತೆ ಎರಗಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ. ತಕ್ಷಣ ಅವರನ್ನು ಸಮೀಪದ ಹರ್ಷ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಫಲಕಾರಿಯಾಗಲಿಲ್ಲ. ಜಮೀನು ವಿವಾದವೇ ಕೊಲೆಗೆ ಕಾರಣ ಎನ್ನಲಾಗುತ್ತಿದೆ.

ರಾತ್ರಿ 8.20ರ ಸಮಯದಲ್ಲಿ ನಾಲ್ಕು ನಿಮಿಷ ವಿದ್ಯುತ್ ಕೈಕೊಟ್ಟಿತ್ತು. ಅದನ್ನು ಬಳಸಿಕೊಂಡು ಈ ಕೃತ್ಯ ಎಸಗಿಸಲಾಗಿದೆ. ಆರೋಪಿಗಳು ಪರಾರಿಯಾಗುತ್ತಿದ್ದಂತೆಯೇ ವಿದ್ಯುತ್ ಬಂದಿದೆ. ಉದ್ದೇಶ ಪೂರ್ವಕವಾಗಿ ವಿದ್ಯುತ್ ತೆಗೆದಿರಬಹುದೇ ಎಂಬ ಶಂಕೆ ವ್ಯಕ್ತವಾಗಿದ್ದು, ತನಿಖೆಯಿಂದ ಸತ್ಯ ಹೊರಬರಬೇಕಿದೆ. ಘಟನೆ ನಡೆದ ಬಳಿಕ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದರಿಂದ ಪಟ್ಟಣದಲ್ಲಿ ಅಘೋಷಿತ ಬಂದ್ ವಾತಾವರಣ ಕಂಡು ಬಂದಿದೆ.

(ದಟ್ಸ್ ಕನ್ನಡ ವಾರ್ತೆ)

ಹಿಂದಿ ಸಿನಿಮಾ ಬಂದ್ : ಕರವೇ ಎಚ್ಚರಿಕೆ
ಕರವೇ ಅಕ್ಷೋಹಿಣಿ ಸೈನ್ಯ ನಿಶ್ಯಬ್ದ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+