ಭಜರಂಗದಳ ಮುಖಂಡನ ಬಂಧನಕ್ಕೆ ಆಗ್ರಹ

ಬೆಂಗಳೂರು, ಸೆ. 18 : ಮಂಗಳೂರು ಗಲಭೆಯ ಹೊಣೆ ಹೊತ್ತಿರುವ ಭಜರಂಗದಳ ರಾಜ್ಯ ಸಂಚಾಲಕ ಮಹೇಂದ್ರಕುಮಾರ್ ಅವರನ್ನು ಬಂಧಿಸುವಂತೆ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಹರಿಚರಣ್ ಸಿಂಗ್ ರಾಜ್ಯಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮಂಗಳೂರು ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಗಲಭೆ ಹೆಚ್ಚಲು ಕಾರಣವಾಗಿದೆ ಎಂದರು. ಮಂಗಳೂರಿನಲ್ಲಿ ನಡೆದಿರುವ ಕ್ರೈಸ್ತ ಚರ್ಚ್ ಗಳ ಮೇಲಿನ ದಾಳಿ ಅತ್ಯಂತ ಖಂಡನೀಯ ಸಂಗತಿ ಎಂದ ಅವರು, ಇದೊಂದು ಉದ್ದೇಶ ಪೂರ್ವಕ ದಾಳಿ ನಡೆಸಲಾಗಿದೆ ಎನ್ನುವುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ ಎಂದು ಕಿಡಿಕಾರಿದರು.

ಮಂಗಳೂರು ಚರ್ಚ್ ಮೇಲಿನ ದಾಳಿಯ ಹೊಣೆಯನ್ನು ಹೊತ್ತಿಕೊಂಡಿರುವ ಭಜರಂಗದಳದ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ ಅವರನ್ನು ಬಂಧಿಸಲು ಸರ್ಕಾರ ಏಕೆ ಹಿಂದೇಟು ಹಾಕತೊಡಗಿದೆ ಎಂದು ಪ್ರಶ್ನಿಸಿದ ಅವರು, ಕ್ರೈಸ್ತರ ಮೇಲಿನ ದಾಳಿ ಅತ್ಯಂತ ಕ್ರೂರ ಘಟನೆ. ಅಮಾಯಕರ ಮೇಲೆ ದಾಳಿ ನಡೆಸಿರುವ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಸರ್ಕಾರವನ್ನು ಅವರು ಒತ್ತಾಯಿಸಿದರು.

ಒರಿಸ್ಸಾದಲ್ಲಿ ಕ್ರೈಸ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಕರ್ನಾಟಕದ ಕ್ರೈಸ್ತರು ಶಾಲಾ ಕಾಲೇಜು ಬಂದ್ ಮಾಡಿ ಒಂದು ದಿನದ ಶಾಂತಿಯುತ ಪ್ರತಿಭಟನೆ ನಡೆಸುವುದು ತಪ್ಪಾ ಎಂದು ಪ್ರಶ್ನಿಸಿದ ಅವರು, ಪ್ರಜಾಪ್ರಭುತ್ವ ದೇಶದಲ್ಲಿ ಕಾನೂನು ಮಿತಿಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಆದರೂ ಕೂಡಾ ರಾಜ್ಯದ ಬಿಜೆಪಿ ಸರ್ಕಾರ ಶಾಲಾ ಕಾಲೇಜು ಬಂದ್ ಮಾಡಿದ್ದಕ್ಕೆ ಶಿಸ್ತು ಕ್ರಮ ಜರುಗಿಸಿರುವುದು ಹಾಗೂ ಸಿಬ್ಬಂದಿಗಳ ಒಂದು ದಿನದ ಸಂಬಳಕ್ಕೆ ಕತ್ತರಿ ಹಾಕಿರುವುದು ದುರಾದೃಷ್ಟಕರ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

ಮಂಗಳೂರು ಗಲಭೆ : ಸಿಓಡಿ ತನಿಖೆಗೆ ಸಂಪುಟ ಅಸ್ತು
ಮಂಗಳೂರು ಗಲಭೆ ರಾಕ್ಷಸೀ ಕೃತ್ಯ : ಮೊಯ್ಲಿ
ಹಿಂದು ಸಂಘಟನೆ ನಿಷೇಧಿಸುವ ಪ್ರಶ್ನೆಯೇ ಇಲ್ಲ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+