ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚರ್ಚ್ ಮೇಲಿನ ದಾಳಿ ನಿಲ್ಲಿಸದಿದ್ದರೆ ಶಿಸ್ತು ಕ್ರಮ

By Staff
|
Google Oneindia Kannada News

ನವದೆಹಲಿ, ಸೆ. 19 : ಚರ್ಚ್ ಗಳ ಮೇಲಿನ ದಾಳಿ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಆಂತರಿಕ ಗಲಭೆ ನಿಯಂತ್ರಿಸಲು ಕ್ರಮಕೈಗೊಳ್ಳುವಂತೆ ಸಂವಿಧಾನದ 355 ಪರಿಚ್ಛೇದದಡಿಯಲ್ಲಿ ಕರ್ನಾಟಕ ಮತ್ತು ಒರಿಸ್ಸಾ ರಾಜ್ಯಗಳಿಗೆ ಎಚ್ಚರಿಕೆ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಕೇಂದ್ರ ಸಚಿವ ಸಂಪುಟದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ. ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ದಾವಣಗೆರೆ ಮತ್ತು ಕೋಲಾರಗಳಲ್ಲಿನ ಚರ್ಚ್ ಗಳ ಮೇಲಿನ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಕಾರ್ಯದರ್ಶಿಗಳು ಈಗಾಗಲೇ ರಾಜ್ಯಪಾಲರು ಮತ್ತು ಮುಖ್ಯ ಕಾರ್ಯದರ್ಶಿಗಳು ಜತೆ ಮಾತುಕತೆ ನಡೆಸಿದ್ದಾರೆ. ಇದರ ನಂತರವೂ ದಾಳಿಯಲ್ಲಿ ಪಾಲ್ಗೊಂಡಿರುವ ದುಷ್ಕರ್ಮಿಗಳನ್ನು ಬಂಧಿಸಲು ಪೊಲೀಸರು ವಿಫಲರಾಗಿರುವುದು ಕೇಂದ್ರ ಸರ್ಕಾರದ ಕೆಂಗಣ್ಣಿಗೆ ಕಾರಣವಾಗಿದೆ.

ಏನಿದು 355 ನೇ ವಿಧಿ

ತುರ್ತು ಸಂದರ್ಭದಲ್ಲಿ ಬಳಸಬಹುದಾದ ಮೂರು ಪ್ರಮುಖ ಸಾಂವಿಧಾನಿಕ ವಿಧಿಗಳು ಕೇಂದ್ರ ಸರ್ಕಾರದ ಬತ್ತಳಿಕೆಯಲ್ಲಿ ಇರುತ್ತವೆ.
* 352 ನೇ ವಿಧಿ ಪ್ರಕಾರ ಕೇಂದ್ರ ಸರ್ಕಾರ ತುರ್ತು ಪರಿಸ್ಥಿತಿಯನ್ನು ಹೇರಬಹುದು. ಈ ಅಸ್ತ್ರವನ್ನು ಇಂದಿರಾಗಾಂಧಿ ಬಳಸಿದ್ದರು.
* 356 ನೇ ವಿಧಿ ಪ್ರಕಾರ ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಡಳಿತ ಹೇರಬಹುದು. 100ಕ್ಕೂ ಹೆಚ್ಚು ಸಲ ಈ ವಿಧಿ ಜಾರಿಯಾಗಿದೆ.
* 355 ನೇ ವಿಧಿಯೇ ಮೂರನೇ ಅಸ್ತ್ರ. ಇದು ಇನ್ನೆರಡು ವಿಧಿಗಳಷ್ಟು ಕಠಿಣವಲ್ಲ. 355 ನೇ ವಿಧಿಯ ಪ್ರಕಾರ ಭಾರತದ ಯಾವುದೇ ರಾಜ್ಯವನ್ನು ಬಾಹ್ಯ ದಾಳಿ ಅಥವಾ ಆಂತರಿಕ ಕಲಹದಿಂದ ರಕ್ಷಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಅಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸ್ವಯಂ ಪ್ರೇರಿತವಾಗಿ ರಾಜ್ಯದ ಆಡಳಿತವನ್ನು ತನ್ನ ವಶಕ್ಕೆ ತೆಗೆದುಕೊಳ್ಳಬಹುದು. ಈ ಸಾಂವಿಧಾನಿಕ ಅಸ್ತ್ರವನ್ನು ಯಾವುದೇ ಕೇಂದ್ರ ಸರ್ಕಾರ ಈ ವರೆಗೊ ಬಳಸಲ್ಲ.

(ದಟ್ಸ್ ಕನ್ನಡ ವಾರ್ತೆ)
ಭಜರಂಗದಳ ಮುಖಂಡನ ಬಂಧನಕ್ಕೆ ಆಗ್ರಹ
ಮಂಗಳೂರು ಗಲಭೆ : ಸಿಓಡಿ ತನಿಖೆಗೆ ಸಂಪುಟ ಅಸ್ತು
ಮಂಗಳೂರು ಗಲಭೆ ರಾಕ್ಷಸೀ ಕೃತ್ಯ : ಮೊಯ್ಲಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X