ಚರ್ಚ್ ಮೇಲೆ ದಾಳಿ, ಈಗ ಬೆಂಗಳೂರು ಸರದಿ
ಬೆಂಗಳೂರು, ಸೆ. 21 : ಕೇಂದ್ರ ಸರ್ಕಾರದ ಎಚ್ಚರಿಕೆಯ ನಡುವೆ ರಾಜ್ಯದಲ್ಲಿ ಚರ್ಚ್ ಗಳ ದಾಳಿ ಮುಂದುವರೆದಿವೆ. ಇಂದು ಬೆಳಗ್ಗೆ ಬೆಂಗಳೂರಿನ ಮರಿಯಣ್ಣನ ಪಾಳ್ಯ ಹಾಗೂ ರಾಜರಾಜೇಶ್ವರಿ ನಗರದಲ್ಲಿನ ಚರ್ಚ್ ಮೇಲೆ ದಾಳಿ ನಡೆದಿದ್ದು, ಪಿಠೋಪಕರಣಗನ್ನು ಧ್ವಂಸಗೊಳಿಸಲಾಗಿದೆ. ಘಟನಾ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ.
ದಾಳಿಯ ಸುದ್ದಿ ತಲುಪುತ್ತಿದ್ದಂತೆ ಸ್ಥಳಕ್ಕೆ ಧಾವಿಸಿರುವ ಪೊಲೀಸರು ಏಳು ಮಂದಿ ಕಿಡಿಗೇಡಿಗಳನ್ನು ಬಂಧಿಸಿದ್ದಾರೆ. ಈ ಮಧ್ಯೆ ಚರ್ಚ್ ಮೇಲಿನ ದಾಳಿ ಖಂಡಿಸಿ ಕ್ರೈಸ್ತ ಧರ್ಮಿಯರು ಹೆಬ್ಬಾಳ ರಿಂಗ್ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪ್ರತಿಭಟನಾಕಾರರ ಮನವೊಲಿಕೆಗೆ ಪೊಲೀಸರು ಮುಂದಾಗಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications