ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೌರಾ ನಿಲ್ದಾಣದಲ್ಲಿ ಸ್ಫೋಟಕಗಳು ಪತ್ತೆ

By Staff
|
Google Oneindia Kannada News

ಕೋಲ್ಕತ್ತಾ, ಸೆ. 23 : ನಗರದ ಹೌರಾ ರೈಲು ನಿಲ್ದಾಣದ ಪ್ಲಾಟ್ ಫಾರಂ ನಂಬರ್ 21 ರಲ್ಲಿದ್ದ ಪ್ಯಾಸೆಂಜರ್ ರೈಲಿನಲ್ಲಿ ಸ್ಫೋಟಕಗಳು ತುಂಬಿದ್ದ ಬ್ಯಾಗೊಂದು ಪತ್ತೆಯಾಗಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ರೈಲು ನಿಲ್ದಾಣದ ಭದ್ರತಾ ಸಿಬ್ಬಂದಿಗಳು ಎಂದಿನಂತೆ ರೈಲು ನಿಲ್ದಾಣ ತಪಾಸಣೆ ನಡೆಸುತ್ತಿದ್ದ ವೇಳೆಯಲ್ಲಿ ಭದ್ರಕ್ ಪ್ಯಾಸೆಂಜರ್ ರೈಲಿನಲ್ಲಿ ಸ್ಫೋಟಕಗಳಿರುವ ಬ್ಯಾಗನ್ನು ಪತ್ತೆ ಹಚ್ಚಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಬಾಂಬ್ ನಿಷ್ಕ್ರಿಯದಳ ಬ್ಯಾಗಿನಲ್ಲಿರುವ ಸ್ಫೋಟಗಳನ್ನು ವಶಕ್ಕೆ ತೆಗೆದುಕೊಂಡು ನಿಷ್ಕ್ರಿಯಗೊಳಿಸುವಲ್ಲಿ ಸಫಲವಾಗಿದೆ. ರೈಲಿನ ಎಲ್ಲ ಬೋಗಿಗಳನ್ನು ಪರಿಶೀಲನೆ ನಡೆಸುತ್ತಿದ್ದು, ಬೇರೆ ಯಾವ ವಸ್ತುಗಳ ದೊರೆತಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ರೈಲಿನಲ್ಲಿ ಸ್ಫೋಟಕಗಳಿವೆ ವಿಷಯ ತಿಳಿಯುತ್ತಿದ್ದಂತೆಯೇ ಸಾರ್ವಜನಿಕರು ರೈಲು ನಿಲ್ದಾಣದಿಂದ ಹೊಗಗೂಡಲು ಆರಂಭಿಸಿದರು. ಇದರಿಂದ ಕೆಲಸ ನಿಲ್ದಾಣದಲ್ಲಿ ಭೀತಿಯ ವಾತಾವರಣ ಉಂಟಾಗಿತ್ತು. ಸಾಕಷ್ಟು ಪ್ರಮಾಣದ ಪೊಲೀಸರು ನಿಲ್ದಾಣಕ್ಕೆ ಆಗಮಿಸಿದ್ದು, ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆದ ಬಗ್ಗೆ ವರದಿಯಾಗಿಲ್ಲ. ಕಳೆದ ಕೆಲ ದಿನದ ಹಿಂದೆ ಕರ್ನಾಟಕದ ಗೃಹ ಸಚಿವ ವಿ.ಎಸ್.ಆಚಾರ್ಯ ರೈಲಿನಲ್ಲಿ ಬಾಂಬ್ ಇಟ್ಟಿರುವ ಸಂಚು ನಡೆದಿದೆ ಎಂದು ಎಚ್ಚರಿಕೆ ನೀಡಿದ್ದರು.

(ದಟ್ಸ್ ಕನ್ನಡ ವಾರ್ತೆ)

ದೆಹಲಿಯಲ್ಲಿ 20 ಕಡೆ ಸ್ಫೋಟಿಸಲು ಸಂಚು ಬಯಲಿಗೆ
ದಿಲ್ಲಿ ಸ್ಫೋಟ : ಬಿಜಾಪುರದಲ್ಲಿ ಶಂಕಿತನ ಬಂಧನ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X