ಐತಿಹಾಸಿಕ ಸಚಿವ ಸಂಪುಟ ಸಭೆಗೆ ಗುಲ್ಬರ್ಗ ಸಜ್ಜು
ಗುಲ್ಬರ್ಗ, ಸೆ. 25:ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಲಕ್ಷ್ಮಣ ಎಸ್. ಸವದಿ ಹಾಗೂ ಪಶುಸಂಗೋಪನಾ ಸಚಿವ ರೇವುನಾಯಕ್ ಬೆಳಮಗಿ ಅವರು ಬುಧವಾರಜಂಟಿ ಪತ್ರಿಕಾಗೋಷ್ಠಿ ನಡೆಸಿ ಗುಲ್ಬರ್ಗಾದಲ್ಲಿ ನಡೆಯಲಿರುವ ಐತಿಹಾಸಿಕ ಸಚಿವ ಸಂಪುಟ ಸಭೆಯ ತಯಾರಿಯ ಬಗ್ಗೆ ವಿವರ ನೀಡಿದರು.
ಕಲಬುರ್ಗಿಯು ಕಲ್ಯಾಣ ನಾಡಿನ ಹೆಬ್ಬಾಗಿಲು. ಸಾಧು ಸಂತರು ಬೀಡು ಬಿಟ್ಟಿರುವ ಈ ಕಲಬುರ್ಗಿಯಲ್ಲಿ 2008 ಸೆ 26 ರಂದು ಎರಡನೆಯ ಬಾರಿಗೆ 26 ವರ್ಷಗಳ ಬಳಿಕ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಒಂದು ವೈಶಿಷ್ಟ್ಯವಾಗಿದೆ. ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಸಂಪುಟ ಸಭೆ ಒಂದು ಐತಿಹಾಸಿಕ ದಾಖಲೆಯಾಗಲಿದೆ.
ಈ ಹಿಂದೆ 1982ರಲ್ಲಿ ಆಗಿನ ಮುಖ್ಯಮಂತ್ರಿ ದಿವಂಗತ ಆರ್. ಗುಂಡೂರಾವ್ ಅವರ ನೇತೃತ್ವದಲ್ಲಿ ಕಲಬುರ್ಗಿಯಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆಯು ನಡೆದಿತ್ತು.
ಹೈದ್ರಾಬಾದ್ - ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದ ಹಲವಾರು ಪ್ರಮುಖ ವಿಷಯಗಳು ಈ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿವೆ. ಇದಕ್ಕಾಗಿ ಈ ಭಾಗದ ವ್ಯಾಪ್ತಿಗೊಳಪಡುವ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ, ಇತರ ಇಲಾಖಾ ಮುಖ್ಯಸ್ಥರಿಂದ ಮತ್ತು ಸಂಘ ಸಂಸ್ಥೆಗಳಿಂದ ಪ್ರಮುಖ ವಿಷಯಗಳ ಪ್ರಸ್ತಾವನೆಗಳನ್ನು ಸರ್ಕಾರ ಈಗಾಗಲೇ ಸಂಗ್ರಹಿಸಿದೆ. ಕ್ರೋಢಿಕರಿಸಿದ ಈ ಪ್ರಮುಖ ವಿಷಯಗಳ ಬಗ್ಗೆ ಸಚಿವ ಸಂಪುಟ ಸಭೆಯು ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳುವುದು ಎಂದು ಸಚಿವರು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಗುಲ್ಬರ್ಗಾದಲ್ಲಿ ಪ್ರತಿ ವರ್ಷ ಸಂಪುಟ ಸಭೆ :ಸಿಎಂ
ಸೆ. 26 ರಂದು ಗುಲ್ಬರ್ಗಾದಲ್ಲಿ ಸಂಪುಟ ಸಭೆ












Click it and Unblock the Notifications