ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೈತಪ್ಪಿದ ಅಧ್ಯಕ್ಷ ಸ್ಥಾನ : ಸಿದ್ದು ಬೆಂಬಲಿಗರ ಆಕ್ರೋಶ

By Staff
|
Google Oneindia Kannada News

Siddu followers protest in Chitradurgaಚಿತ್ರದುರ್ಗ, ಸೆ. 26 : ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಸಿದ್ದು ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಕಚೇರಿಯ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದರಿಂದ ಘಟನಾ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧ್ಯಕ್ಷ ಸ್ಥಾನ ಸಿಗದಿರುವುದು ಪಕ್ಷದಲ್ಲಿ ಅವರಿಗೆ ಹಿನ್ನೆಡೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಗಾದಿಗೆ ಮೂಲ ಕಾಂಗ್ರೆಸ್ ಮತ್ತು ವಲಸೆ ಕಾಂಗ್ರೆಸ್ಸಿಗರ ಮಧ್ಯೆ ಶೀತಲ ಸಮರವೇ ಏರ್ಪಟ್ಟಿತ್ತು. ಮುಂದಿನ ಲೋಕಸಭೆ ಹಾಗೂ ಉಪಚುನಾವಣೆ ದೃಷ್ಟಿಯಿಂದ ಸಿದ್ದರಾಮಯ್ಯ ಪಕ್ಷದ ನೇತೃತ್ವ ವಹಿಸುವುದು ಸೂಕ್ತ ಎಂದು ಹೈಕಮಾಂಡ್ ನಿರ್ಧರಿಸಿತ್ತು. ಆದರೆ ಕೊನೆಗಳಿಗೆಯಲ್ಲಿ ಸಿದ್ದರಾಮಯ್ಯ ಅವರಿಗೆ ಅಧ್ಯಕ್ಷ ಪಟ್ಟವೂ ಇಲ್ಲ, ಕಾರ್ಯಾಧ್ಯಕ್ಷ ಗಾದಿಯೂ ನೀಡದೆ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರಿಗೆ ತೀವ್ರ ನಿರಾಶೆ ಮೂಡಿಸಿದೆ.

ಕಾಂಗ್ರೆಸ್ ಹೈಕಮಾಂಡ್ ಕ್ರಮವನ್ನು ಖಂಡಿಸಿರುವ ಸಿದ್ದು ಬೆಂಬಲಿಗರು ಅಲ್ಲಲ್ಲಿ ಪ್ರತಿಭಟನೆ, ದಾಂಧಲೆ ಮಾಡುತ್ತಿರುವ ವರದಿಗಳು ಬರುತ್ತಿವೆ. ಮುದಿನ ದಿನಗಳಲ್ಲಿ ಇದು ಮತ್ತಷ್ಟು ತಾರಕಕ್ಕೇರುವ ಸಾಧ್ಯತೆಗಳಿವೆ.

ಅತ್ಮವಿಮರ್ಶನಾ ಸಭೆ : ಡಿಕೆಶಿ

ಇತ್ತೀಚಿನ ದಿನಗಳಲ್ಲಿ ಪಕ್ಷ ಅನುಭವಿಸಿರುವ ಹಿನ್ನೆಡೆಯನ್ನು ಗಮನದಲ್ಲಿರಿಸಿಕೊಂಡು ಶೀಘ್ರದಲ್ಲಿ ಆತ್ಮವಿಮರ್ಶನಾ ಸಭೆ ಕರೆಯಲಾಗುವುದು ಎಂದು ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರಾಗಿ ನಿಯೋಜಿತರಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಸ್ಪಷ್ಟಪಡಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಬಲವರ್ಧನೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಕಳೆದ ಚುನಾವಣೆಯಲ್ಲಿ ಪಕ್ಷದ ಪ್ರದರ್ಶನ ನಿರಾಶದಾಯಕವಾಗಿದೆ. ಪಕ್ಷದ ಹಿನ್ನೆಡೆಗೆ ಕಾರಣಗಳನ್ನು ಹುಡುಕುವುದರ ಜತೆಗೆ ಎಲ್ಲ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಬಲಪಡಿಸುವುದಾಗಿ ಶಿವಕುಮಾರ್ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಕೆಪಿಸಿಸಿ ಅಧ್ಯಕ್ಷರಾಗಿ ಆರ್.ವಿ.ದೇಶಪಾಂಡೆ ನೇಮಕ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X