ಕಾಂಗ್ರೆಸ್,ಜೆಡಿಎಸ್ ಹೊಂದಾಣಿಕೆ ನಾಚಿಕೆಗೇಡು:ಡಿವಿಎಸ್
ಮಂಗಳೂರು, ಸೆ.28: ''ಮುಂಬರುವ ಉಪ ಚುನಾವಣೆಗೆ ಬಿಜೆಪಿ ವಿರುದ್ಧ ಸೆಣಸಲು ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದನ್ನು ನಾವು ಅಷ್ಟಾಗಿ ತಲೆಗೆ ಹಚ್ಚಿಕೊಂಡಿಲ್ಲ'' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದ ಗೌಡ ತಿಳಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳೆರಡೂ ಮುಳುಗುತ್ತಿರುವ ಹಡಗುಗಳು. ರಾಜಕೀಯ ಪ್ರವಾಹದಲ್ಲಿ ಸಿಕ್ಕಿಕೊಂಡು ಒಬ್ಬರನ್ನೊಬ್ಬರು ರಕ್ಷಿಸಿಕೊಳ್ಳಲು ತಬ್ಬಿಕೊಳ್ಳುತ್ತಿದ್ದಾರೆ ಅಷ್ಟೆ ಎಂದು ವ್ಯಂಗವಾಡಿದರು.
ಬಿಜೆಪಿ ಪಕ್ಷದ ಮೇಲೆ ಜನರ ಆಶೀರ್ವಾದ ಇರುವ ಕಾರಣ ಚುನಾವಣೆ ಎದುರಿಸಲು ನಮಗೆ ಯಾವುದೇ ಸಮಸ್ಯೆಯಿಲ್ಲ ಎಂದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಮತ್ತೆ ಕೈಜೋಡಿಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.
(ದಟ್ಸ್ ಕನ್ನಡ ವಾರ್ತೆ)
ದೇವೇಗೌಡರ ಸಖ್ಯಕ್ಕೆ ದೇಶಪಾಂಡೆ ಒಲವು












Click it and Unblock the Notifications