ಸತ್ಯ ಶೋಧನಾ ಸಮಿತಿ ರಚನೆ ದೇವೇಗೌಡ ಆಗ್ರಹ
ಬೆಂಗಳೂರು, ಸೆ. 29 : ದೇಶದ ವಿವಿಧೆಡೆ ನಡೆಯುತ್ತಿರುವ ಚರ್ಚ್ ಗಳ ಮೇಲಿನ ದಾಳಿ ಹಾಗೂ ಗೋಧ್ರಾ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಹಾಲಿ ಸುಪ್ರಿಂಕೋರ್ಟ್ ನ್ಯಾಯಾಧೀಶರನ್ನು ಒಳಗೊಂಡ ಸತ್ಯಶೋಧನಾ ಸಮಿತಿಯೊಂದನ್ನು ರಚಿಸಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರ ಸರ್ಕಾರ ಈ ಬಗ್ಗೆ ಶೀಘ್ರ ಎಚ್ಚೆತ್ತುಕೊಂಡು ಮುಂದಾಗುವ ಅನಾಹುತವನ್ನು ತಪ್ಪಿಸಬೇಕು ಎಂದರು. ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಅಲ್ಪಸಂಖ್ಯಾತರ ಮೇಲೆ ಮುಖ್ಯವಾಗಿ ಕ್ರಿಶ್ಚಿಯನ್ನರ ಮೇಲೆ ದಾಳಿ ಅವ್ಯಾಹತವಾಗಿ ನಡೆದಿದೆ. ಇದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ದಿಟ್ಟ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಜೆಡಿಎಸ್ ವರಿಷ್ಠ ದೇವೇಗೌಡ ಸತ್ಯಶೋಧನಾ ಸಮಿತಿ ರಚನೆಯ ಒತ್ತಾಯವನ್ನು ತಳ್ಳಿ ಹಾಕಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸತ್ಯಶೋಧನಾ ಸಮಿತಿ ಅವಶ್ಯಕತೆ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಚರ್ಚ್ ಮತ್ತು ಇನ್ನಿತರ ದಾಳಿಗಳನ್ನು ತಡೆಯಲು ರಾಜ್ಯ ಪೊಲೀಸ್ ಸಮರ್ಥವಾಗಿದೆ. ರಾಜ್ಯದಲ್ಲಿ ಶಾಂತಿ ನೆಲೆಸಿದೆ. ಅನಗತ್ಯ ಹೇಳಿಕೆ ನೀಡಿ ಗೊಂದಲ ನಿರ್ಮಾಣ ಮಾಡುವುದು ಎಂದು ಹೇಳಿದರು. ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ರಾಜ್ಯ ಪ್ರಮುಖ ಸ್ಥಳದಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಉಗ್ರರ ಹಿಟ್ ಲಿಸ್ಟ್ ನಲ್ಲಿ ಬಿಜಾಪುರ, ಆಲಮಟ್ಟಿ
ದಾಳಿಗೊಳಗಾದ ಚರ್ಚ್ ಪರಿಶೀಲಿಸಿದ ಕೇಂದ್ರ ತಂಡ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯ












Click it and Unblock the Notifications