ಜೆಡಿಎಸ್ ಜತೆ ಮೈತ್ರಿ ಹೈಕಮಾಂಡ್ ಗೆ ಕೈಲಿದೆ

ಹುಬ್ಬಳ್ಳಿ, ಸೆ. 1 : ಮುಂಬರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವನೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಮೈತ್ರಿ ಸಂಬಂಧಿಸಿದಂತೆ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು. ರಾಜ್ಯದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದು ವ್ಯಂಗ್ಯವಾಡಿದ ದೇಶಪಾಂಡೆ, ಮುಖ್ಯಮಂತ್ರಿ ಯಡಿಯೂರಪ್ಪ ಸೇಡಿನ ರಾಜಕೀಯ ಮಾಡುತ್ತಾ ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿದ್ದಾರೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಅಲ್ಪಸಂಖ್ಯಾತರು ಭಯಭೀತಿಯಲ್ಲಿ ಜೀವನ ನಡೆಸಬೇಕಿರುವ ಸಂದಿಗ್ಧ ವಾತಾವರಣವನ್ನು ಬಿಜೆಪಿ ಸರ್ಕಾರ ನಿರ್ಮಿಸಿದೆ. ದಿನೆದಿನೇ ಅಲ್ಪಸಂಖ್ಯಾತರ ಮೇಲೆ ದಾಳಿಗಳು ನಡೆಯತೊಡಗಿರುವುದು ದುರದೃಷ್ಟಕರ ಸಂಗತಿ ಎಂದು ಅವರು ಕಳವಳ ವ್ಯಕ್ತಪಡಿಸಿದರು. ಸರ್ಕಾರ ಬಜೆಟ್ ನಲ್ಲಿ ನೀಡಿರುವ ಉಚಿತ ವಿದ್ಯುತ್ ಬರೀ ಭರವಸೆಯಾಗಿಯೇ ಉಳಿದಿದೆ. ಉಚಿತ ವಿದ್ಯುತ್ ನೀಡುವುದಾಗಿ ಹೇಳಿ ಮುಖ್ಯಮಂತ್ರಿ ಯಡಿಯೂರಪ್ಪ ರೈತರನ್ನು ವಂಚಿಸಿದ್ದಾರೆ ಎಂದು ಆರೋಪಿಸಿದರು. ರಾಜ್ಯದಲ್ಲಿ ತಾತ್ಕಾಲಿಕ ಲೋಡ್ ಶೆಡ್ಡಿಂಗ್ ಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಅವರು, ಇಂಧನ ಸಚಿವರಿಗೆ ಅನುಭವದ ಕೊರತೆ ಇರುವುದರಿಂದ ಬೇಕಾಬಿಟ್ಟಿ ಆದೇಶಗಳು ಸರ್ಕಾರದಿಂದ ಹೊರಬೀಳತೊಡಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)
ದೇವೇಗೌಡರ ಸಖ್ಯಕ್ಕೆ ದೇಶಪಾಂಡೆ ಒಲವು
ಲೋಕಸಭೆ ಚುನಾವಣೆಗೆ ಹಳೆ ದೋಸ್ತಿಗಳ ಹೊಸ ಮೈತ್ರಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+