ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಕ್ಷದಲ್ಲಿನ ಗುಂಪುಗಾರಿಕೆಗೆ ಸೋಲಿಗೆ ಕಾರಣ : ಖರ್ಗೆ

By Staff
|
Google Oneindia Kannada News

ಬೆಂಗಳೂರು, ಅ. 3 : ಮುಂಬರುವ ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾತನಾಡುತ್ತಿದ್ದ ಅವರು, ದುರಾಡಳಿತ ನಡೆಸುತ್ತಿರುವ ಬಿಜೆಪಿಗೆ ಜನಸಾಮಾನ್ಯ ತಕ್ಕ ಪಾಠ ಕಲಿಸಲಿದ್ದಾನೆ ಎಂದರು. ಬಿಜೆಪಿ ಸರ್ಕಾರದ ಮೂರು ತಿಂಗಳ ಆಡಳಿತದಿಂದ ಜನರು ಭ್ರಮನಿರಶನಗೊಂಡಿದ್ದಾರೆ. ರಾಜ್ಯದಲ್ಲಿ ಉಂಟಾಗಿರುವ ಕೋಮುಗಲಭೆ, ಅಶಾಂತಿಯಿಂದ ಬಿಜೆಪಿ ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. ಶಾಂತಿಯ ನಾಡಾಗಿದ್ದ ರಾಜ್ಯವನ್ನು ಇಂದು ಬಿಜೆಪಿ ಸರ್ಕಾರ ಸಂಪೂರ್ಣ ಕೇಸರಿಮಯಗೊಳಸಿದೆ. ಅಲ್ಪಸಂಖ್ಯಾತರು ಭಯದ ನೆರಳಲ್ಲಿ ಬದುಕುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಸರ್ಕಾರವನ್ನು ತರಾಟೆ ತೆಗೆದುಕೊಂಡರು.

ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷದಲ್ಲಿ ಗುಂಪುಗಾರಿಕೆ ನಡೆದಿದ್ದರಿಂದ ನಾವು ಸೋಲನುಭವಿಸಬೇಕಾಯಿತು. ಆದರೆ ಇಂದಿನ ವಾತಾವರಣ ಹಾಗಿಲ್ಲ, ಪಕ್ಷಕ್ಕೆ ನೂತನ ಅಧ್ಯಕ್ಷ, ಕಾರ್ಯಾಧ್ಯಕ್ಷರು ನೇಮಕವಾಗಿದ್ದಾರೆ. ಬಿಜೆಪಿ ಸರ್ಕಾರದ ಆಡಳಿತ ಜನರಿಗೆ ಸಾಕೆನಿಸಿದೆ. ಇದೆಲ್ಲದರ ಫಲ ಕಾಂಗ್ರೆಸ್ ಪಕ್ಷದಿಂದ ಈ ಸಾರಿ 20ಕ್ಕೂ ಹೆಚ್ಚು ಸಂಸದರು ಆಯ್ಕೆಯಾಗಲಿದ್ದಾರೆ ಎಂದು ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಸರ್ಕಾರದ ನಡೆ ಮೇಲೆ ಹದ್ದಿನ ಕಣ್ಣಿಟ್ಟಿರುವ ಜನರು ಮುಂಬರುವ ಲೋಕಸಭೆ ಹಾಗೂ ವಿಧಾನಸಭೆಯ ಉಪಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ. ಕೆಲವೇ ತಿಂಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷಕ್ಕೆ ಪಕ್ಷಾಂತರ ಮಾಡಿರುವವರಿಗೆ ಉಪಚುನಾವಣೆಯಲ್ಲಿ ಮತದಾರರ ತನ್ನ ಮತಗಳ ಮೂಲಕ ಉತ್ತರ ನೀಡಲು ಸಿದ್ಧವಾಗಿದ್ದಾನೆ ಎಂದು ಖರ್ಗೆ ಎಚ್ಚರಿಸಿದರು.

ರಾಜ್ಯದಲ್ಲಿ ನಡೆದಿರುವ ಚರ್ಚ್ ಮೇಲಿನ ದಾಳಿಯನ್ನು ಹಾಲಿ ಸುಪ್ರಿಂಕೋರ್ಟ್ ನ್ಯಾಯಾಧೀಶರೊಬ್ಬರಿಂದ ತನಿಖೆ ನಡೆಸಬೇಕು. ಹಾಗೂ ಸತ್ಯಾಸತ್ಯತೆ ಹೊರಬರಲು ಕೂಡಲೇ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಖರ್ಗೆ ಆಗ್ರಹಿಸಿದರು.

(ದಟ್ಸ್ ಕನ್ನಡ ವಾರ್ತೆ)

ಜೆಡಿಎಸ್ ಜತೆ ಮೈತ್ರಿ ಹೈಕಮಾಂಡ್ ಗೆ ಕೈಲಿದೆ
ಕಾನೂನು ಕೈಗೆತ್ತಿಕೊಂಡರೆ ಉಗ್ರ ಕ್ರಮ:ಬಿಎಸ್ ವೈ
ಖರ್ಗೆ-ಸೋನಿಯಾ ಭೇಟಿ, ಸಿದ್ದು ಬಳಗದಲ್ಲಿ ಕಳವಳ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X