ಬಿಜೆಪಿ ವಿರುದ್ಧ ಕಾಂಗ್ರೆಸ್ ನ ಕಾಲ್ನಡಿಗೆ ಜಾಥಾ
ಬೆಂಗಳೂರು, ಅ.3: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶನಿವಾರ(ಅ.4)ಭಾರತೀಯ ಜನತಾ ಪಕ್ಷದವಿರುದ್ಧ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿದೆ.
ಶನಿವಾರ ಬೆಳಗ್ಗೆ 10.30ಕ್ಕೆ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಿಂದ ಹೊರಡುವ ಕಾಲ್ನಡಿಗೆ ಜಾಥಾ ಇಂಡಿಯನ್ ಎಕ್ಸ್ ಪ್ರೆಸ್ ವೃತ್ತ್ತದ ಮೂಲಕ ಹಾದು ಚಿನ್ನಸ್ವಾಮಿ ಕ್ರೀಡಾಂಗಣ ಮಾರ್ಗವಾಗಿ ಎಂಜಿ ರಸ್ತೆಯಲ್ಲಿರುವ ಮಹಾತ್ಮಾಗಾಂಧಿ ವೃತ್ತದ ಬಳಿ ಸೇರಲಿದೆ.
ಈ ಪ್ರತಿಭಟನಾ ಮೆರವಣಿಗೆಗೆ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವ ವಹಿಸಲಿದ್ದಾರೆ. ಪ್ರತಿಭಟನೆಯಲ್ಲಿ ಕಾಂಗ್ರೆಸ್ ನ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸುವುದಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ರಾಮಚಂದ್ರಪ್ಪ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಪಕ್ಷದಲ್ಲಿನ ಗುಂಪುಗಾರಿಕೆಗೆ ಸೋಲಿಗೆ ಕಾರಣ : ಖರ್ಗೆ












Click it and Unblock the Notifications