ಚರ್ಚ್ ದಾಳಿ ಸರ್ಕಾರದ ಕ್ರಮಕ್ಕೆ ಕೇಂದ್ರ ತೃಪ್ತಿ
ಬೆಂಗಳೂರು ಅ. 5 : ರಾಜ್ಯದಲ್ಲಿ ನಡೆದ ಚರ್ಚ್ ದಾಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ. ಹಾಗೂ ರಾಜ್ಯದಲ್ಲಿರುವ ಉಗ್ರ ಜಾಲ ಬೇಧಿಸಿದ ಪೊಲೀಸರ ಕರ್ತವ್ಯ ನಿಷ್ಠೆಯನ್ನು ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
ಶನಿವಾರ ರಾತ್ರಿ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರನ್ನು ಭೇಟಿ ಇತ್ತೀಚೆಗೆ ರಾಜ್ಯದಲ್ಲಿ ಆಗಿರುವ ಚರ್ಚ್ ದಾಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಸುಧೀಘ್ರ ಸಮಾಲೋಚನೆ ನಡೆಸಿದ ಶಿವರಾಜ್ ಪಾಟೀಲ್, ನಂತರ ರಾಜ್ಯ ಗೃಹ ವಿ.ಎಸ್. ಆಚಾರ್ಯ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಿದ ರಾಜ್ಯ ಸರ್ಕಾರ ತೆಗೆದುಕೊಂಡು ಬಿಗಿ ಕ್ರಮಗಳಿಂದ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದಾಳಿಯನ್ನು ತಡೆದಿರುವುದು ಸಂತಸದ ವಿಷಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿದ್ದಾರೆ. ಹೆಚ್ಚಿನ ಸೌಲಭ್ಯಗಳ ಅಗತ್ಯವಿದ್ದಲ್ಲಿ ಕೇಂದ್ರದ ಸಹಾಯ ಪಡೆದುಕೊಳ್ಳಬಹುದು. ಹಾಗೂ ಕರಾವಳಿ ಪ್ರದೇಶವನ್ನು ಅಡಗುತಾಣ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಹಾರಾಷ್ಟ್ರ, ಚೆನ್ನೈ, ಅಂಧ್ರಪ್ರದೇಶ, ಕೇರಳ ರಾಜ್ಯಗಳ ಕರಾವಳಿ ಪ್ರದೇಶದಲ್ಲಿ ಉಗ್ರರು ಜಾಲ ಹಬ್ಬಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ಉಗ್ರರ ಜಾಲ ಬೇಧಿಸಲು ಹೆಲಿಕ್ಯಾಪ್ಟರ್ ಗಳನ್ನು ಬಳಸುವ ಚಿಂತನೆ ಸರ್ಕಾರ ನಡೆಸಿದೆ ಎಂದು ಶಿವರಾಜ್ ಪಾಟೀಲ್ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಉಲ್ಲಾಳ ಬಳಿ 11 ಶಂಕಿತ ವ್ಯಕ್ತಿಗಳ ಬಂಧನ
ಮಂಗಳೂರಲ್ಲಿ ಮಾನವ ಹಕ್ಕು ಆಯೋಗದ ಅಧ್ಯಕ್ಷ
ರಾಜ್ಯದಲ್ಲಿ 355 ನೇ ವಿಧಿ ಜಾರಿ ಸಂಭವ ?












Click it and Unblock the Notifications