ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರು.43 ಕೋಟಿ ವೆಚ್ಚದಲ್ಲಿ ಸಂಚಾರ ನಿರ್ವಹಣಾ ಕೇಂದ್ರ

By Staff
|
Google Oneindia Kannada News

ಬೆಂಗಳೂರು, ಅ. 6 : ಸುಮಾರು ರು.43 ಕೋಟಿ ವೆಚ್ಚದಲ್ಲಿ ಸಂಚಾರ ನಿರ್ವಹಣಾ ಕೇಂದ್ರ ಕಟ್ಟಡಕ್ಕೆ ಸೋಮವಾರ ಬೆಂಗಳೂರಿನ ಉಪ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಂಕು ಸ್ಥಾಪನೆ ಮಾಡಿದರು.

ರಾಜ್ಯ ಪೊಲೀಸ್ ಗೃಹ ನಿರ್ಮಾಣ ಮಂಡಳಿ ಈ ಕಟ್ಟಡ ನಿರ್ವಹಣೆ ವಹಿಸಿದ್ದು, ಮುಂದಿನ 18 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಿದೆ. ಈ ಕಟ್ಟಡಕ್ಕೆ ಸುಮಾರು 30 ಕೋಟಿ ರು. ವೆಚ್ಚದಲ್ಲಿ ವಿವಿಧ ಉಪಕರಣಗಳನ್ನು ಒದಗಿಸಲಾಗುವುದು. ಈ ಸಂಚಾರ ನಿರ್ವಹಣಾ ಕೇಂದ್ರ ನಗರದ ಎಲ್ಲ ಸಂಚಾರ ಚಟುವಟಿಕೆಗಳ ಕೇಂದ್ರವಾಗಿರುತ್ತದೆ.

ಅಶೋಕನಗರದ ಪೊಲೀಸ್ ಠಾಣೆಯಲ್ಲಿಂದು ಕರ್ತವ್ಯ ನಿರತ ಸಂಚಾರಿ ಪೊಲೀಸ್ ಪಡೆಗೆ ದ್ವಿಚಕ್ರ ವಾಹನಗಳ ವಿತರಣೆ ಹಾಗೂ ನೂತನ ಸಿಗ್ನಲ್ ಗಳಿಗೆ ಚಾಲನೆ ನೀಡಿ ಮಾತನಾಡುತ್ತಿದ್ದ ಯಡಿಯೂರಪ್ಪ, ಬೆಂಗಳೂರಿನಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ವಾಹನ ದಟ್ಟಣೆ ನಿಯಂತ್ರಣಕ್ಕೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ ಎಂದರು. ಈ ಮೂಲಕ ರಾಜ್ಯದಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕ ಚಟುವಟಿಕೆಗಳನ್ನು ಹತ್ತಿಕ್ಕುವ ಪ್ರಯತ್ನ ಕೈಗೊಳ್ಳಲಾಗುವುದು ಎಂದರು.

ನಗರದ ವಿವಿಧ ಭಾಗಗಳಲ್ಲಿ, ವೃತ್ತಗಳಲ್ಲಿ, ತಿರುವುಗಳಲ್ಲಿ ಅತ್ಯಾಧುನಿಕ ಸಿಗ್ನಲ್ ಗಳನ್ನು ಅವಳವಡಿಸಲಾಗಿದ್ದು, ಅದರೊಂದಿಗೆ ಸಿಸಿ ಟಿವಿ, ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇದರಿಂದ ಅನುಮಾನಾಸ್ಪದ ವ್ಯಕ್ತಿ ಅಥವಾ ಅಕ್ರಮ ತಡೆಗಟ್ಟಲು ಸಹಕಾರಿಯಾಗಲಿದೆ ಎಂದರು. ವಾಹನ ದಟ್ಟಣೆ ನಿಯಂತ್ರಣ ಕುರಿತಂತೆ ಸಂಚಾರಿ ಪೊಲೀಸರಿಗೆ ಅಂತಾರಾಷ್ಟ್ರೀಯ ಮಟ್ಟದ ತರಬೇತಿ ನೀಡಲಾಗುವುದು ಎಂದು ಅವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ಹಿರಿಯ ನಾಗರಿಕರ ರಕ್ಷಣೆಗೆ ಬದ್ಧ : ಯಡಿಯೂರಪ್ಪ
ಬೆಂಗಳೂರು ಪೊಲೀಸರಿಗೆ ಹಬ್ಬದ ಸಂಭ್ರಮ ಇಲ್ಲ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X