ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಐದು ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟ

By Staff
|
Google Oneindia Kannada News

ನವದೆಹಲಿ, ಅ. 14 : ಕೇಂದ್ರದಲ್ಲಿ ಅಧಿಕಾರ ಗದ್ದುಗೆ ಏರಲು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ 'ಮಿನಿ ಮಹಾಚುನಾವಣೆ' ಎಂದೇ ಪರಿಗಣಿಸಲ್ಪಟ್ಟಿರುವ ಮಧ್ಯಪ್ರದೇಶ, ರಾಜಸ್ಥಾನ, ಮಿಜೋರಾಂ, ಜಮ್ಮು ಕಾಶ್ಮೀರ, ಛತ್ತೀಸ್ ಗಢ ಹಾಗೂ ದೆಹಲಿ ಸೇರಿ ಒಟ್ಟು 5 ವಿಧಾನಸಭೆ ಚುನಾವಣೆಯ ದಿನಾಂಕವನ್ನು ಮಂಗಳವಾರ ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.

ಮತದಾನ ಘೋಷಣೆಯಾಗಿರುವ ರಾಜ್ಯಗಳಲ್ಲಿ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ. ಆದರೆ ಇತ್ತೀಚೆಗೆ ಅಮರನಾಥ್ ಭೂವಿವಾದ ಸೇರಿದಂತೆ ಮತ್ತಿತರರ ಗಲಭೆಗಳಿಂದ ತೀವ್ರ ಹಿಂಸಾಚಾರ ಕಂಡಿರುವ ಜಮ್ಮು ಕಾಶ್ಮೀರದಲ್ಲಿ ಮತದಾನ ನಡೆಯುವ ದಿನಾಂಕವನ್ನು ಆಯೋಗ ಪ್ರಕಟಿಸಿಲ್ಲ.

ಮಂಗಳವಾರ ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಎನ್.ಗೋಪಾಲಸ್ವಾಮಿ, ನಕ್ಸಲ್ ಪೀಡಿತ ಪ್ರದೇಶವಾಗಿದೆ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿರುವುದರಿಂದ ಛತ್ತೀಸ್ ಗಡದಲ್ಲಿ ಎರಡು ಹಂತದಲ್ಲಿ ಮತದಾನ ನಡೆಸಲು ನಿರ್ಧರಿಸಲಾಗಿದ್ದು, ನವೆಂಬರ್ 14 ಮತ್ತು ನವೆಂಬರ್ 20 ರಂದು ಮತದಾನ ನಡೆಯಲಿದೆ. ಉಳಿದ ನಾಲ್ಕು ರಾಜ್ಯಗಳಾದ ಮಧ್ಯಪ್ರದೇಶ (ನವೆಂಬರ್.25), ರಾಜಸ್ಥಾನ (ಡಿಸೆಂಬರ್. 4), ದೆಹಲಿ (ನವೆಂಬರ್.29) ಹಾಗೂ ಮಿಜೋರಾಂ (ನವೆಂಬರ್.29) ನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಸಲಾಗುವುದು. ಡಿಸೆಂಬರ್ 8 ರಂದು ಏಕಕಾಲದಲ್ಲಿ ಎಲ್ಲ ರಾಜ್ಯಗಳಲ್ಲಿ ಮತದಾನ ನಡೆಯಲಿದೆ ಎಂದು ಅವರು ಹೇಳಿದರು.

ಉಪಚುನಾವಣೆಯ ಚಕಾರವಿಲ್ಲ

ಇತ್ತೀಚೆಗೆ ಬಿಜೆಪಿ ನಡೆಸಿದ ಅಪರೇಷನ್ ಕಮಲದ ಮೂಲಕ ಕರ್ನಾಟಕದಲ್ಲಿ ತೆರವಾಗಿರುವ 7 ವಿಧಾನಸಭೆ ಸ್ಥಾನ ಹಾಗೂ ಮದ್ದೂರು ಶಾಸಕ ಸಿದ್ದರಾಜು ನಿಧನದಿಂದ ಖಾಲಿಯಾಗಿರುವ ಒಂದು ಸ್ಥಾನ ಸೇರಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಚುನಾವಣಾ ದಿನಾಂಕ ಪ್ರಕಟವಾಗಲಿದೆ ಎಂದು ದಟ್ಟವಾದ ವಂದತಿ ಹಬ್ಬಿತ್ತು. ಆದರೆ ಕೇಂದ್ರ ಚುನಾವಣಾ ಆಯೋಗ ಇದರ ಬಗ್ಗೆ ಚಕಾರವೆತ್ತದಿರುವುದು ಆಶ್ಚರ್ಯ ತರಿಸಿದೆ.

(ದಟ್ಸ್ ಕನ್ನಡ ವಾರ್ತೆ)

ಬಿರುಸುಗೊಂಡ ಉಪಚುನಾವಣೆ ಕಸರತ್ತು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X