ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ಜೆಡಿಎಸ್ ಮೈತ್ರಿಗೆ ಸಿಎಂ ಕಿಡಿ

By Staff
|
Google Oneindia Kannada News

ಮೈಸೂರು, ಅ. 14 : ಮುಂಬರುವ ಉಪಚುನಾವಣೆ ಎದುರಿಸಲು ಕಾಂಗ್ರೆಸ್ ಜೆಡಿಎಸ್ ಮೈತ್ರಿಗೆ ಮುಂದಾಗಿರುವ ಕ್ರಮವನ್ನು ತೀವ್ರವಾಗಿ ಖಂಡಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದು ಜನತೆಗೆ ಎಸಗುತ್ತಿರುವ ದ್ರೋಹ ಎಂದು ಕಿಡಿಕಾರಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅ. 31 ರಂದು ನಡೆಯಲಿರುವ ಮೂರು ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅ. 31 ರಂದು ನಡೆಯಲಿರುವ ಮೂರು ವಿಧಾನ ಪರಿಷತ್ ಕ್ಷೇತ್ರಗಳಾದ ಧಾರವಾಡ, ಬೆಳಗಾವಿ ಹಾಗೂ ಕೊಡಗಿನ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳು ನಡೆಯಲಿವೆ. ಧಾರವಾಡ ಕ್ಷೇತ್ರಕ್ಕೆ ಶಿವರಾಜ್ ಸಜ್ಜನ, ಬೆಳಗಾವಿಯಿಂದ ಶಶಿಕಾಂತ ನಾಯಿಕ ಹಾಗೂ ಕೊಡಗಿನಿಂದ ಜಿ. ಮೇದಪ್ಪ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ.

ಸೋಮವಾರ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ನೇತೃತ್ವದಲ್ಲಿ ನಡೆದ ಭಾವೈಕ್ಯತಾ ಸಭೆ ಬರೀ ಕಾಟಾಚಾರಕ್ಕೆ ಎಂದು ಆರೋಪಿಸಿದ ಯಡಿಯೂರಪ್ಪ, ರಾಜ್ಯದಲ್ಲಿ ನಡೆಯುತ್ತಿರುವ ಸಾಧಕ ಬಾಧಕಗಳ ಕುರಿತು ಚರ್ಚಿಸಲು ಸಭೆಯಲ್ಲಿ ಅವಕಾಶ ನೀಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿ ನಡೆಯುತ್ತಿರುವ ಕೋಮುಗಲಭೆಗೆ ಕೇಂದ್ರ ಸರ್ಕಾರ ಅಗತ್ಯ ರೀತಿಯಲ್ಲಿ ಸ್ಪಂದಿಸಲಿಲ್ಲ ಎಂದು ಕಿಡಿಕಾರಿದರು. ಕೋಮುಗಲಭೆ ನಿಯಂತ್ರಣಕ್ಕೆ ಕೇಂದ್ರ ತೋರಿದ ತಾತ್ಸರದ ನಿಲುವಿನಿಂದ ಮತ್ತಷ್ಟು ಅವಘಡ ಸಂಭವಿಸಿತು ಎಂದು ಯಡಿಯೂರಪ್ಪ ನೇರ ಆರೋಪ ಮಾಡಿದರು.

(ದಟ್ಸ್ ಕನ್ನಡ ವಾರ್ತೆ)

ಐದು ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟ
ಬಿರುಸುಗೊಂಡ ಉಪಚುನಾವಣೆ ಕಸರತ್ತು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X