ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನಲ್ಲಿ ಐಸಿಟಿಎಸ್ ಕೇಂದ್ರ ಸ್ಥಾಪನೆ

By Staff
|
Google Oneindia Kannada News

ಬೆಂಗಳೂರು, ಅ. 19 : ಹೆಸರಘಟ್ಟ ಹೋಬಳಿಯ ಶಿವಕೋಟೆ ಗ್ರಾಮದಲ್ಲಿ ಭಾರತದ ಮೊಟ್ಟ ಮೊದಲ ಇಂಟರ್ ನ್ಯಾಷನಲ್ ಸೆಂಟರ್ ಫಾರ್ ಥಿಯಾರಿಟಿಕಲ್ ಸೈನ್ಸ್ (ಐಸಿಟಿಎಸ್) ಸ್ಥಾಪನೆಯಾಗಲಿದೆ ಎಂದು ಮಾಹಿತಿ ತಂತ್ರಜ್ಞಾನ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್ ತಿಳಿಸಿದರು.

ಕೇಂದ್ರ ಸರ್ಕಾರದ ಅಣುಶಕ್ತಿ ಇಲಾಖೆಯ ಟಾಟಾ ಇನ್ಸ್ ಟಿಟ್ಯೂಟ್ ಫಾರ್ ಫಂಡಮೆಂಟಲ್ ರಿಸರ್ಚ್ ಸಂಸ್ಥೆಯು ಸ್ಥಾಪಿಸಲಿರುವ ಈ ಸಂಸ್ಥೆಗೆ ರಾಜ್ಯ ಸರ್ಕಾರ ಶಿವಕೋಟೆ ಗ್ರಾಮದಲ್ಲಿ ಧೀರ್ಘಾವಧಿ ಗುತ್ತಿಗೆ ಆಧಾರದ ಮೇಲೆ 30 ವರ್ಷಗಳ ಅವಧಿಗೆ 17.35 ಎಕರೆ ಜಮೀನು ನೀಡಲು ನಿರ್ಧರಿಸಿದೆ ಎಂದು ಶನಿವಾರ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದ ವಿರ್ಧಾರ್ಥಿಗಳಿಗೆ ಈ ಕೇಂದ್ರದಿಂದ ಹೆಚ್ಚಿನ ಅನುಕೂಲವಾಗಲಿದೆ. ಬೆಂಗಳೂರು ಜ್ಞಾನದ ರಾಜಧಾನಿಯಾಗಿ ಬೆಳೆಯಲು ವೇದಿಕೆ ಕಲ್ಪಿಸಿದಂತಾಗುತ್ತದೆ ಎಂದರು. ಯುವ ಮತ್ತು ಪದವೀಧರ ವಿದ್ಯಾರ್ಥಿಗಳಿಗೆ ಪುನರ್ ಮನನ ಮತ್ತು ತರಬೇತಿ ಕಾರ್ಯಕ್ರಮಗಳನ್ನು ಐಸಿಟಿಎಸ್ ಹಮ್ಮಿಕೊಳ್ಳುತ್ತದೆ. ಈ ಕಾರ್ಯಕ್ರಮಗಳು ಭಾರತದ ವಿಶ್ವವಿದ್ಯಾಲಯಗಳಲ್ಲಿನ ಬೋಧನಾ ಮತ್ತು ಸಂಶೋಧನಾ ಮಟ್ಟದ ಮೌಲ್ಯಮಾಪನ ಮಾಡಲಿದೆ ಎಂದು ವಿವರಿಸಿದರು.

ಈ ಸಂಸ್ಥೆಯ ಸಲಹೆ ಸಮಿತಿಯಲ್ಲಿ ನೊಬೆಲ್ ಪ್ರಶಸ್ತಿ ಪುರಷ್ಕೃತ ವಿಜ್ಞಾನಿ ಡೇವಿಡ್ ಗ್ರಾಸ್ ಸೇರಿದಂತೆ 10 ಮಂದಿ ಸದಸ್ಯರಿದ್ದು, ಈ ಸಂಸ್ಥೆಯು ದೇಶಧ ವಿವಿಧ ಪ್ರದೇಶಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ಅವರು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

ರಾಜ್ಯಕ್ಕೆ ಟಾಟಾ ಮೂಲಭೂತ ಸಂಶೋಧನಾ ಸಂಸ್ಥೆ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X