ಅ.21 ಕ್ಕೆ ವೀರೇಂದ್ರ ಹೆಗ್ಗಡೆ ಷಷ್ಠ್ಯಬ್ಧಿ ಕಾರ್ಯಕ್ರಮ
ಬೆಂಗಳೂರು, ಅ. 20 : ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಡಾ. ವೀರೇಂದ್ರ ಹೆಗ್ಗಡೆ ಷಷ್ಠ್ಯಬ್ಧಿ ಆಚರಣೆಯನ್ನು ನಗರದ ಕ್ಯಾಪಿಟಲ್ ಹೋಟೆಲ್ ನಲ್ಲಿ ಅ. 21 ರಂದು ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ದಿಯಲ್ಲಿ ವಿನೂತನ-ಸಮಸ್ಯೆ ಹಾಗೂ ಅವಕಾಶ ಕುರಿತು ಕಾರ್ಯಾಗಾರ ನಡೆಯಲಿದೆ. ಬೆಳಗ್ಗೆ 10ಕ್ಕೆ ತಿರುಪತಿ ಸಂಸ್ಕೃತ ವಿದ್ಯಾಲಯದ ಕುಲಪತಿ ಡಾ. ವಿ.ಆರ್.ಪಂಚಮುಖಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಜೆ ನಡೆಯಲಿರುವ ಸಮರೋಪ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವೀರೇಂದ್ರ ಹೆಗ್ಗಡೆ ಭಾಗವಹಿಸುವರು. ಕಾರ್ಯಕ್ರಮಕ್ಕೆ ಸೂಕ್ತ ಬಿಗಿ ಭದ್ರತೆಯನ್ನು ನಿಯೋಜಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಧರ್ಮಸ್ಥಳದಲ್ಲಿ ಭಜನೆ ಕಮ್ಮಟ
ಕಳೆದ ಹತ್ತು ದಿನಗಳಿಂದ ದರ್ಮಸ್ಥಳದಲ್ಲಿ ಭಜನೆ ಕಮ್ಮಟ ನಡೆಯತೊಡಗಿದೆ. ಮಾನಸಿಕ ನೆಮ್ಮದಿ ಕಂಡುಕೊಳ್ಳುವುದು ಮೂಲ ಉದ್ದೇಶವಾಗಿರುವ ಭಜನೆ ಕಮ್ಮಟದಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದಾರೆ. ಮಹಿಳೆಯರು, ವೃದ್ಧರು, ಯುವಕ, ಯುವತಿಯರು ಭಟನಾ ಮೇಳದಲ್ಲಿ ಭಾಗವಹಿಸಿರುವುದು ವಿಶೇಷವಾಗಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications