ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೂವಿನಹಡಗಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ

By Staff
|
Google Oneindia Kannada News

ಹೂವಿನಹಡಗಲಿ, ಅ. 20 : ಪಟ್ಟಣದಲ್ಲಿದ್ದ ಸರ್ಕಾರಿ ಇಂಜನಿಯರಿಂಗ್ ಕಾಲೇಜನ್ನು ಬಳ್ಳಾರಿಗೆ ಸ್ಥಳಾಂತರಿಸಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಇಂದು ವಿವಿಧ ಸಂಘಟನೆಗಳು ನಡೆಸುತ್ತಿರುವ ಹೂವಿನಹಡಗಲಿ ಬಂದ್ ಬಹುತೇಕ ಯಶಸ್ವಿಯಾಗಿದೆ. ಪಟ್ಟಣದ ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳು ಬಂದ್ ಮಾಡಲಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ನಡೆದ ಬಗ್ಗೆ ವರದಿಯಾಗಿಲ್ಲ.

ಇತ್ತೀಚೆಗೆ ನಡೆದ ಸಚಿವ ಸಂಪುಟದಲ್ಲಿ ಹೂವಿನ-ಹಡಗಲಿಯಲ್ಲಿರುವ ಸರ್ಕಾರಿ ಇಂಜನಿಯರಿಂಗ್ ಕಾಲೇಜಿನಲ್ಲಿ ಅಗತ್ಯ ಸಂಖ್ಯೆಯ ವಿದ್ಯಾರ್ಥಿಗಳ ಕೊರತೆ ಇದೆ ಎಂದು ಸರ್ಕಾರಿ ಕಾಲೇಜನ್ನು ಬಳ್ಳಾರಿಗೆ ಸ್ಥಳಾಂತರಿಸುವ ನಿರ್ಧಾರವನನ್ನು ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಎಂ.ಪಿ.ಪ್ರಕಾಶ್ಗೃಹ ಸಚಿವರಾಗಿದ್ದಾಗ ಹೂವಿನ ಹಡಗಲಿಯಲ್ಲಿ ಇಂಜಿನಿಯರಿಂಗ್ ಕಾಲೇಜ್ ಸ್ಥಾಪನೆಗೆ ಅನುಮತಿ ದೊರೆತಿತ್ತು.

ಸರ್ಕಾರದ ಕ್ರಮವನ್ನು ಖಂಡಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪಟ್ಟಣದ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ. ಪಟ್ಟಣದಲ್ಲಿದ್ದ ಇಂಜಿನಿಯರಿಂಗ್ ಕಾಲೇಜನ್ನು ಬಳ್ಳಾರಿಗೆ ಸ್ಥಳಾಂತರ ಮಾಡುವ ವಿಷಯದಲ್ಲಿ ರಾಜಕೀಯ ಹಿತಾಸಕ್ತಿ ಅಡಗಿದೆ. ರಾಜಕೀಯ ದುರದ್ದೇಶದಿಂದಲೇ ಬಿಜೆಪಿ ಸರ್ಕಾರ ಈ ಕೆಲಸ ಮಾಡಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಭಾರಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ. ಅಹಿತಕರ ಘಟನೆ ಜರಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X