ಕುಮಾರಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ
ಬೆಂಗಳೂರು, ಅ. 21 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಲಂಚ ಪಡೆದ ಆಪಾದನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ರಾಜ್ಯ ಸರ್ಕಾರ ಆದೇಶಿಸಿದೆ. ಮೊಕದ್ದಮೆ ಪರ ವಾದಿಸಲು ಸರ್ಕಾರಿ ಅಭಿಯೋಜಕರಾಗಿ ಹೈಕೋರ್ಟಿನ ಮಾಜಿ ಹೆಚ್ಚುವರಿ ನ್ಯಾಯಾಧೀಶ ರವಿ ಬಿ.ನಾಯಕ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರಿನ ಈಜೀಪುರ ಬಡಾವಣೆಯಲ್ಲಿ ಖಾಸಗಿ ಸಹಭಾಗಿತ್ವದ ಯೋಜನೆಯಲ್ಲಿ ಮೇವರಿಕ್ ಹೋಲ್ಡಿಂಗ್ಸ್ ಸಂಸ್ಥೆಗೆ ಗುತ್ತಿಗೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ 50 ಕೋಟಿ ರುಪಾಯಿ ಲಂಚ ಪಡೆದಿದ್ದಾರೆ ಎಂದು ಮಾಜಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದರು. ಆ ಸಂಬಂಧ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ.
ಕುಮಾರಸ್ವಾಮಿ ಹೇಳಿಕೆಯಿಂದ ಬಿಜೆಪಿ ವಲಯದಲ್ಲಿ ಭಾರಿ ಪ್ರತಿರೋಧ ವ್ಯಕ್ತವಾಗಿತ್ತು. ಅವರು ವಿರುದ್ಧ ಕಾನೂನು ಕ್ರಮವನ್ನು ಜರುಗಿಸಬೇಕು, ಮಾತ್ರವಲ್ಲದೆ ಅವರ ಅಧಿಕಾರಾವಧಿಯಲ್ಲಿ ನಡೆದ ಎಲ್ಲಾ ಯೋಜನೆಗಳ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದರು.
(ದಟ್ಸ್ ಕನ್ನಡ ವಾರ್ತೆ)
ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಮನ್ಸ್ ಜಾರಿ
ಎಚ್ ಡಿಕೆ ವಿರುದ್ಧ ವೀರಶೈವರು ಪ್ರತಿಭಟನೆ ನಿರ್ಧಾರ
ಮಾನನಷ್ಟ ಮೊಕದ್ದಮೆಗೆ ಭಯವಿಲ್ಲ : ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಈಶ್ವರಪ್ಪ ಮಾನನಷ್ಟ ವ್ಯಾಜ್ಯ


Click it and Unblock the Notifications
