ಹೂಡಿ ಬಳಿ ಕುಸಿದು ಬಿದ್ದ ಬಹುಮಹಡಿ ಕಟ್ಟಡ

ಬೆಂಗಳೂರು, ಅ. 23 : ಐಟಿಪಿಎಲ್ ಸಮೀಪದ ಹೂಡಿ ರಸ್ತೆಯಲ್ಲಿನ ನಿರ್ಮಾಣ ಹಂತದಲ್ಲಿದ್ದ ಶಾಂತಿ ನಿಕೇತನ ಬಹುಮಹಡಿ ಅಪಾರ್ಟ್ ಮೆಂಟ್ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ನೂರಾರು ಮಂದಿ ಕೆಲಸ ನಿರ್ವಹಿಸುತ್ತಿದ್ದರಿಂದ ಅನೇಕರು ಕಟ್ಟಡದೊಳಗೆ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿ ಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯಗಳಲ್ಲಿ ನಿಮಗ್ನರಾಗಿದ್ದಾರೆ.

ಹೂಡಿ ರಸ್ತೆಯಲ್ಲಿರುವ ಶಾಂತಿನಿಕೇತನ 17 ಅಂತಸ್ತಿನ ವಾಣಿಜ್ಯ ಮಳಿಗೆಯಾಗಿದೆ. ಈಗಾಗಲೇ 15 ಅಂತಸ್ತು ಕಟ್ಟಡಗಳನ್ನು ನಿರ್ಮಿಸಲಾಗಿತ್ತು. ಆದರೆ ಕಟ್ಟಡದ ಕಾಮಗಾರಿ ಕಳೆಪೆಯಾಗಿದ್ದರಿಂದ ಕಳೆದ ಕೆಲ ದಿನಗಳ ಹಿಂದೆ ಕಟ್ಟಡವು ಒಂದು ಕಡೆಗೆ ಸಂಪೂರ್ಣವಾಗಿ ವಾಲಿತ್ತು. ಹಾಗಿದ್ದರೂ ಕೂಡಾ ಇಂದು ಸುಮಾರು 120 ಮಂದಿ ಕೆಲಸ ಮಾಡುತ್ತಿದ್ದರು. ಇಂದು ಮಧ್ಯಾಹ್ನ ಇದ್ದಕ್ಕಿದ್ದ ಹಾಗೆ ಕಟ್ಟಡ ಕುಸಿದಿದ್ದು, ಅನೇಕರು ಗಾಬರಿಯಿಂದ ಹೊರಬಂದಿದ್ದಾರೆ. ಆದರೆ ಮಹಿಳೆಯರು ಅದರಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಭಯದ ಕಾರಣ ಮಹಿಳೆಯರು ಹೊರಬರಲು ಸಾಧ್ಯವಾಗಿಲ್ಲ ಎನ್ನಲಾಗಿದೆ.

ಅಗ್ನಿಶಾಮಕ ದಳ ಹಾಗೂ ಪೊಲೀಸರು ಕಟ್ಟಡದಡಿ ಸಿಲುಕಿರುವವರ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ.ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ದಳ ತೆರಳಿ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+