ಪಟಾಕಿ ಗೋದಾಮಿಗೆ ಬೆಂಕಿ 19 ಸಾವು
ಭರತ್ ಪುರ(ರಾಜಸ್ಥಾನ), ಅ. 23 : ಜಿಲ್ಲೆಯ ದೀಗಾ ಪಟ್ಟಣದ ಮನೆಯೊಂದರಲ್ಲಿ ಸಂಗ್ರಹಿಸಿಡಲಾಗಿದ್ದ ಪಟಾಕಿ ಗೋದಾಮಿವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸ್ಫೋಟಗೊಂಡಿದ್ದರಿಂದ 19 ಜನರು ಸಜೀವ ದಹನವಾಗಿರುವ ಹೃದಯವಿದ್ರಾವಕ ದುರ್ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ.
ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದ್ದು, ಜೀವನ್ಮರಣದಲ್ಲಿ ಹೋರಾಟ ನಡೆಸಿರುವ 14 ಮಂದಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ದೀಪಾವಳಿ ಹಬ್ಬದ ನಿಮಿತ್ತ ಮಾರಾಟ ಮಾಡಲು ಉಗ್ರಾಣವೊಂದರಲ್ಲಿ ಪಟಾಕಿಗಳನ್ನು ಸಂಗ್ರಹಿಸಿಡಲಾಗಿತ್ತು. ಅಗ್ನಿ ಶಾಮಕ ದಳ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಹರಸಾಹಸ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications